ಬಬಲೇಶ್ವರ ಮತಕ್ಷೇತ್ರದಲ್ಲಿ ಅತೀ ಹೆಚ್ಚು ಸುಮಾರ ಶೇ. 78.28, ದೇ. ಹಿಪ್ಪರಗಿ ಮತಕ್ಷೇತ್ರದಲ್ಲಿ ಅತೀ ಕಡಿಮೆ ಶೇ. 57.03 ರಷ್ಟು ಮತದಾನ- ಉಳಿದೆಡೆ ಎಷ್ಟು ಗೊತ್ತಾ?

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನಡೆದ ಮತದಾನ ಒಂದೆರಡು ಅಹಿತಕರ ಘಟನೆಗಳನ್ನು ಹೊರತು ಪಡಿಸಿ ಸಂಪೂರ್ಣ ಶಾಂತಿಯುತವಾಗಿದ್ದು, ಬಬಲೇಶ್ವರ ಮತಕ್ಷೇತ್ರದಲ್ಲಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅಂದರೆ ಶೇ. 78.28ರಷ್ಟು ಮತದಾನ ದಾಖಲಾಗಿದೆ.  ಈಗಲೂ ಇನ್ನೂ ಹಲವು ಗ್ರಾಮಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಸರತಿ ಸಾಲುಗಳಲ್ಲಿ ನಿಂತಿದ್ದು, ಈ ಪ್ರಮಾಣ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.  ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಅತೀ ಕಡಿಮೆ ಅಂದರೆ ಶೇ. 57.03ರಷ್ಟು ಮತದಾನ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಮತಕ್ಷೇತ್ರವಾರು ದಾಖಲಾದ ಮತದಾನದ ವಿವರ

ಮುದ್ದೇಬಿಹಾಳ- ಶೇ. 63.85

ದೇವರ ಹಿಪ್ಪರಗಿ- ಶೇ. 57.03

ಬಸವನ ಬಾಗೇವಾಡಿ- ಶೇ. 61.40

ಬಬಲೇಶ್ವರ- ಶೇ. 78.28

ವಿಜಯಪುರ ನಗರ- ಶೇ. 64.68

ನಾಗಠಾಣ(ಮೀ)- ಶೇ. 57.82

ಇಂಡಿ- ಶೇ. 62.23

ಸಿಂದಗಿ- ಶೇ. 64ಯ43

ಮತದಾನ ಆರಂಭವಾದ ಮೊದಲ ಎರಡು ಗಂಟೆಗಳಲ್ಲಿ ಬಬಲೇಶ್ವರ ಮತ್ತು ವಿಜಯಪುರ ನಗರ ಮತಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಪಾಲ್ಗೋಂಡು ತಮ್ಮ ಹಕ್ಕು ಚಲಾಯಿಸಿದರು.

Leave a Reply

ಹೊಸ ಪೋಸ್ಟ್‌