ಇಂಡಿಯಲ್ಲಿ ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ ಯಶವಂತರಾಯಗೌಡ ವಿ. ಪಾಟೀಲ

ವಿಜಯಪುರ: ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸತತ ಮೂರನೇ ಬಾರಿಗೆ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಈ ಬಾರಿ ಯಶವಂತರಾಯಗೌಡ ವಿ. ಪಾಟೀಲ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರನ್ನು 10329 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಯಶವಂತರಾಯಗೌಡ ಪಾಟೀಲ ಅವರಿಗೆ 71785 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರಿಗೆ 61456 ಮತಗಳು ಬಂದವು.  ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಅವರು 39862 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ.

 

Leave a Reply

ಹೊಸ ಪೋಸ್ಟ್‌