ಸಿ.ಬಿ.ಎಸ್.ಇ ಪರೀಕ್ಷೆ: ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ವಿಜಯಪುರ ನಗರಕ್ಕೆ ಪ್ರಥಮ
ವಿಜಯಪುರ: ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಪಾವನಿ ಕುಲಕರ್ಣಿ ಈ ಬಾರಿ ಸಿ ಬಿ ಎಸ್ ಇ ಪರೀಕ್ಷೆಯಲ್ಲಿ ವಿಜಯಪುರ ನಗರಕ್ಕೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ನಡೆದ ಸಿ ಬಿ ಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶಾಲೆ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಶಾಲೆಯಿಂದ ಪರೀಕ್ಷೆಯಿಂದ ಹಾಜರಾದ ಎಲ್ಲ 91 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ […]
ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಮೇ 20ರಿಂದ 22ರ ವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ- ವ್ಯವಸ್ಥಿತ, ಸುಗಮ ಪರೀಕ್ಷೆಗೆ ಡಿಸಿ ಡಾ. ದಾನಮ್ಮನವರ ಸೂಚನೆ
ವಿಜಯಪುರ: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಇದೇ ಮೇ 20 ರಿಂದ ಮೇ.22 ರವರೆಗೆ ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದ ಅವರು, ಮೇ.20ರ ಶನಿವಾರದಂದು […]
ತೊಂದರೆಯಲ್ಲಿ ಇರುವವರಿಗೆ ಫಲಾಪೇಕ್ಷೆಯಿಲ್ಲದ ಸಹಾಯ ಮನೋಭಾವ ಬೆಳೆಸಿಕೊಳ್ಳಬೇಕು- ಜಾವೀದ ಜಮಾದಾರ
ವಿಜಯಪುರ: ತೊಂದರೆಯಲ್ಲಿರುವವರಿಗೆ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಶ್ವಾರ್ಥ ಸೇವೆಯಾಗುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕ್ರತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಡಾ.ಜಾವಿದ ಜಮಾದಾರ ನುಡಿದರು. ತೊರವಿ ಬಳಿ ಇರುವ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಭವನದಲ್ಲಿ ಆರ್ಟ್ ಆಫ್ ಗಿವ್ಹಿಂಗ್ ಫೌಂಡೇಶನ್ ನವದೆಹಲಿ ಇವರ ಸಹಯೋಗದಲ್ಲಿ ನಡೆದ ವಿಶ್ವ ಸೇವಾ ಮನೋಭಾವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಸುಂದರ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರು ಸೇವಾ ಮನೋಭಾವ, ಸೌಹಾರ್ದತೆಯನ್ನು ಬೆಳೆಸಿಕೊಳ್ಳಲು ಶ್ರಮಿಸಬೇಕು. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ […]
ಗ್ರಾಮ ಪಂಚಾಯತಿಗಳಲ್ಲಿ ಆನ್ ಲೈನ್ ಮೂಲಕ ತೆರಿಗೆ ಪಾವತಿಗೆ ಅವಕಾಶ- ಸಿಇಓ ರಾಹುಲ ಶಿಂಧೆ
ವಿಜಯಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಸೇವೆಗಳನ್ನು ತ್ವರಿತವಾಗಿ ಆನಲೈನ್ ಮೂಲಕ ಒದಗಿಸಲು ಬಾಪೂಜಿ ಸೇವಾ ಕೇಂದ್ರ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ, ಅನುಷ್ಠಾನಗೊಳಿಸಲಾಗಿದೆ. ಅದರ ಮುಂದಿನ ಭಾಗವಾಗಿ ಈಗ ಬಾಪೂಜಿ ಸೇವಾ ಕೇಂದ್ರ ತಂತ್ರಾಂಶದ ಮೂಲಕ ಸಾರ್ವಜನಿಕರು ಗ್ರಾಮ ಪಂಚಾಯತಿಯ ಆಸ್ತಿ ತೆರಿಗೆಯನ್ನು ಮತ್ತು ಸೇವೆಗಳಿಗೆ ಸಂಬಂಧಿಸಿದ ಶುಲ್ಕಗಳನ್ನು ಆನ್ ಲೈನ್ ಮೂಲಕ ಪಾವತಿಸಲು ಸರಕಾರದಿಂದ ಅನುವು ಮಾಡಿಕೊಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ […]