ಮಗಳೆದುರು ತಾಯಿಯನ್ನು ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ ವಿಧಿಸಿದ ವಿಜಯಪುರ ನ್ಯಾಯಾಲಯ
ವಿಜಯಪುರ: ಮಹಿಳೆಯೊಬ್ಬಳನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿಗೆ ವಿಜಯಪುರ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದ ಆರೋಪಿ ಅಕ್ಬರ್ ಉರ್ಫ್ ಅಕ್ಬರಬಾಷಾ ಗಾಲಿಬಸಾಬ ಬಾಗವಾನ ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸತೀಶ ಎಲ್. ಪಿ. ಮರಣ ದಂಡನೆ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಸರಕಾರ ಪರ ಅಭಿ.ಯೋಜಕಿ ವಿ. ಎಸ್. ಇಟಗಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಘಟನೆ ಹಿನ್ನೆಲೆ […]
ಜುಲೈ 8 ರಂದು ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್- ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ- ನ್ಯಾಯಾಧೀಶ ವೆಂಕಣ್ಣ ಹೊಸಮನಿ
ವಿಜಯಪುರ: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ. ಹೊಸಮನಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಕ್ಷಿದಾರರು ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದ್ದಾರೆ. […]
ರೂ. 2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್ ಬಿ ಐ- 30 ಸೆಪ್ಟೆಂಬರ್ 2023ರ ವರೆಗೆ ನೋಟುಗಳ ಬದಲಾವಣೆಗೆ ಅವಕಾಶ
ನವದೆಹಲಿ: ರೂ. 2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ನಿರ್ಧರಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆರ್ ಬಿ ಐ ಚೀಫ್ ಜನರಲ್ ಮ್ಯಾನೇಜರ್ ಯೋಗೇಶ ದಯಾಳ, ನವೆಂಬರ್ 2016ರಲ್ಲಿ ರೂ. 500 ಮತ್ತು ರೂ. 1000 ನೋಟುಗಳನ್ನು ಬ್ಯಾನ್ ಮಾಡಿದ ನಂತರ ಆರ್ಥಿಕ ಪರಿಸ್ಥಿತಿಗೆ ಅನುಕೂಲವಾಗಲು ರೂ. 2000 ನೋಟುಗಳನ್ನು ಪರಿಚಯಿಸಲಾಗಿತ್ತು. ಇತರ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಜನರಿಗೆ ಲಭ್ಯವಾಗುವ ನಿಟ್ಟಿನಲ್ಲಿ ರೂ. 2000 ನೋಟನ್ನು ಬಿಡುಗಡೆ ಮಾಡಲಾಗಿತ್ತು. […]
ಉಮರಾಣಿ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನ ಕೆರೂರ ಗ್ರಾಮಕ್ಕೆ ಸ್ಥಳಾಂತರ- ಡಿಸಿ ಡಾ. ದಾನಮ್ಮನವರ
ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರ ಗ್ರಾಮ ಪಂಚಾಯತಿಯ ಕೇಂದ್ರ ಸ್ಥಾನವನ್ನು ಮತ್ತೆ ಕೆರೂರ ಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ಈ ಮುಂಚೆ ಕೆರೂರಿನಲ್ಲಿದ್ದ ಕೇಂದ್ರ ಸ್ಥಾನವನ್ನು ಉಮರಾಣಿ ಗ್ರಾಮಕ್ಕೆ ಸ್ಥಳಾಂತರಿಸಿ ಸರಕಾರ ಅಧಿಸೂಚನೆ ಹೊರಡಿಸಿತ್ತು. ಕಲಬುರ್ಗಿ ಹೈಕೋರ್ಟ್ ಪೀಠ ಅಧಿಸೂಚನೆಯನ್ನು ಮಾನ್ಯ ಮಾಡದ ಕಾರಣ ಈ ಮುಂಚೆ ಇದ್ದಂತೆ ಕೆರೂರಿಗೆ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವನ್ನು ಸ್ಥಳಾಂತರ ಮಾಡಲಾಗಿದೆ. ಈ ಕೆರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ […]
ತಾಳಿಕೋಟಿ ತಾಲೂಕಿನ ನಾನಾ ಗ್ರಾ. ಪಂ. ಗಳಿಗೆ ಜಿ. ಪಂ. ಸಿಇಓ ರಾಹುಲ ಶಿಂಧೆ ಭೇಟಿ- ಕಾಮಗಾರಿ ಪರಿಶೀಲನೆ
ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ತಾಳಿಕೋಟೆ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿ, ನಾನಾ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಗ್ರಾವiದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದರು. ನರೇಗಾ ಯೋಜನೆಯಲ್ಲಿ ಹೆಚ್ಚಿಗೆ ಕೂಲಿಯಾಧಾರಿತ ಕಾಮಗಾರಿಗಳನ್ನು ಆರ್ಥಿಕ ವರ್ಷದ ಆರಂಭದಲ್ಲಿ ಕೈಗೊಂಡಲ್ಲಿ ನಂತರದ ದಿನಗಳಲ್ಲಿ ಸಾಮಗ್ರಿ ಆಧಾರಿತ ಕಾಮಗಾರಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪರಿಶೀಲಿಸಲಾಗುವುದು. ನರೇಗಾ ಯೋಜನೆಯಲ್ಲಿ ಹೆಚ್ಚಿನ ಕೂಲಿ ಕಾರ್ಮಿಕರಿಗೆ […]