ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆಶಿ, ಎಂ. ಬಿ. ಪಾಟೀಲ ಶಾಸಕರು ಸಚಿವರಾಗಿ ಪ್ರಮಾಣ ವಚನ‌ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೂತನ ಸರಕಾರ ಅಧಿಕಾರಕ್ಕೆ ಬಂದಿದ್ದು, ಸಿಎಂ‌ ಆಗಿ ಎಸ್. ಸಿದ್ಧರಾಮಯ್ಯ ಮತ್ತು ಡಿಸಿಎಂ ಆಗಿ ಡಿ. ಕೆ. ಶಿವಕುಮಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಎಂ. ಬಿ. ಪಾಟೀಲ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಎಂಟು ಜನ‌ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹಿರಿಯ ಶಾಸಕರಾದ ಡಾ. ಜಿ. ಪರಮೇಶ್ವರ, ಕೆ. ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಎಂ. ಬಿ. ಪಾಟೀಲ, ಸತೀಶ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ ಖರ್ಗೆ ಮತ್ತು ಬಿ. ಝಡ್. ಜಮೀರ್ ಅಹ್ಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡರಾದ ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ, ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಯುಪಿಎ ಮೈತ್ರಿಕೂಟದ ನಾನಾ ಮುಡಂಡರು‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಜನರು ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾಗಿದ್ದು ಗಮನಾರ್ಹವಾಗಿತ್ತು.

Leave a Reply

ಹೊಸ ಪೋಸ್ಟ್‌