ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಣೆ- ಬಸವ ನಾಡಿನಲ್ಲಿ ರಾಜ್ಯದಲ್ಲಿಯೇ ಮೊದಲ ಸಲ ವಿತರಣೆ

ವಿಜಯಪುರ: ಶಾಲಾ ಮಕ್ಕಳಿಗೆ ರುಚಿ-ಶುಚಿಯಾದ ಮಧ್ಯಾಹ್ನದ ಬಿಸಿಯೂಟ ತಯಾರಿಕೆ ಮಾಡುವ ಅಡುಗೆ ಸಿಬ್ಬಂದಿಗಳಿಗೆ ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಸಮವಸ್ತ್ರ ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ ವಿಜಯಪುರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರರವರ ಸಹಯೋಗದಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿಶೇಷ ದಾಖಲಾತಿ ಆಂದೋಲನ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಹಾಗೂ ಡೇ-ನಲ್ಮ್ ದೀನದಯಾಳ ಅಂತ್ಯೋದಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಗಳ ಸಹಭಾಗಿತ್ವದಲ್ಲಿ ವಿಜಯಪುರ ನಗರದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ-37 ರಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಬಿಸಿ ಊಟ ಯೋಜನೆ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರದ ಕಿಟ್ ವಿತರಣೆ ಮಾಡಲಾಯಿತು.

ಮಕ್ಕಳಿಗೆ ಊಟ ತಯಾರಿಸುವ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರ ನೀಡುವ ಮೂಲಕ ಆಹಾರ ಗುಣಮಟ್ಟ, ಸ್ವಚ್ಛತೆಗೆ ಆದ್ಯತೆ ನೀಡಲು ಹಮ್ಮಿಕೊಂಡ ಈ ವಿನೂತನ ಕಾರ್ಯಕ್ರಮಕ್ಕೆ ಸಮವಸ್ತ್ರವನ್ನು ಖರೀದಿಸದೇ ಸ್ವಸಹಾಯ ಸಂಘಗಳಿಗೆ ಆರ್ಥಿಕ ಸ್ವಾವಲಂಬನೆ ದೊರಕಿಸುವ ನಿಟ್ಟಿನಲ್ಲಿ ಸ್ವ ಸಂಘಗಳೇ ತಯಾರಿಸಿದ ಸಮವಸ್ತ್ರಗಳನ್ನು ಇಂದು ಅಡುಗೆ ಸಿಬ್ಬಂದಿಗಳಿಗೆ ಸಾಂಕೇತಿವಾಗಿ ವಿತರಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.
ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಣೆ- ಬಸವ ನಾಡಿನಲ್ಲಿ ರಾಜ್ಯದಲ್ಲಿಯೇ ಮೊದಲ ಸಲ ವಿತರಣೆ ಮಾಡಲಾಯಿತು.

 

ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

ಈ ಕಾರ್ಯಕ್ರಮಕ್ಕೆ ನಾಗಠಾಣಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಅವರು ಚಾಲನೆ ನೀಡಿ ಮಾತನಾಡಿ, ಪ್ರಾಥಮಿಕ ಶಿಕ್ಷಣ ಎನ್ನುವದು ಮಕ್ಕಳ ಉನ್ನತ್ತ ಭವಿಷ್ಯದ ಭದ್ರ ಬುನಾದಿ. ಹೀಗಾಗಿ, ಸರಕಾರಿ ಶಾಲೆಗಳು ಮಕ್ಕಳಿಗೆ ಉತ್ತಮಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಪಾಲಕರ ಮತ್ತು ಗುರುಗಳ ಪಾತ್ರಅತೀ ಮುಖ್ಯವಾಗಿರುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ವಿನೂತನವಾಗಿ ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು ಆರು ಸಾವಿರ ಜನ ಮಧ್ಯಾಹ್ನದ ಬಿಸಿ ಊಟ ತಯಾರಿಸುವ ಅಡುಗೆ ಸಿಬ್ಬಂದಿಯವರಿಗೆ ಸ್ವಚ್ಚ ಮತ್ತು ಶಿಸ್ತಿನಿಂದ ಕಾಣಲು ಹಾಗೂ ಅವರ ಸುರಕ್ಷತೆ ದೃಷ್ಠಿಯಿಂದ ಜಿಲ್ಲಾ ಪಂಚಾಯಿತಿ ಡೇ ನಲ್ಮ ದೀನದಯಾಳ ಅಂತ್ಯೋದಯ ರಾಷ್ಟ್ರೀಯ ಗ್ರಾಮೀನ ಜೀವನೋಪಾಯ ಅಭಿಯಾನ ಯೋಜನೆ ವತಿಯಿಂದ ಗ್ರಾಮೀಣ ಭಾಗದ ಸ್ವ-ಸಹಾಯ ಸಂಘದ ಸುಮಾರು 300 ಜನ ಸದಸ್ಯರು ಹಾಗೂ ಜಿಲ್ಲಾ ಕೌಶಲ್ಯ ಇಲಾಖೆಯ ನಗರ ಸ್ವ-ಸಹಾಯ ಸಂಘದ ಮಹಿಳೆಯರು ಸೇರಿ ಸಿದ್ಧಪಡಿಸಿರುವ ಸಮವಸ್ತ್ರ ಕಿಟ್ ಗಳನ್ನು ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ವಿತರಣೆ ಮಾಡಲಾಗಿದ್ದು, ಈ ಸಮವಸ್ತ್ರತಯಾರಿಕೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ, ಕಾರ್ಯ ನಿರ್ವಹಣಾಧಿಕಾರಿ ಕೆ. ಹೊಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಬಿ. ಮೊರಟಗಿ, ಸಹಾಯಕ ನಿರ್ದೇಶಕ ಕಾಸೀಮಸಾಬ ಮಸಳಿ, ಶಾಲಾ ಮುಖ್ಯ ಶಿಕ್ಷಕ ಶೋಭಾ ಎಸ್. ನಾಯಿಕ, ಜಿಲ್ಲಾ ಪಂಚಾಯಿತಿ ಮತ್ತು ಶಾಲೆಯಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌