ವಿಶ್ವ ಹಾಲು ದಿನಾಚರಣೆ: ಹೈನೋದ್ಯಮ ರೈತರ ಪಾಲಿಗೆ ವರದಾನ- ಡಾ. ಸಂಗಣ್ಣ ಎಲ್. ಲಕ್ಕಣ್ಣವರ
ವಿಜಯಪುರ: ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು, ರೈತರ ಪಾಲಿಗೆ ಹೈನೋದ್ಯಮ ವರದಾನವಾಗಿದೆ. ರೈತರ ಹಾಲಿಗೆ ಯೋಗ್ಯ ದರದ ಮಾರುಕಟ್ಟೆಯನ್ನು ವರ್ಷವಿಡಿ ಒದಗಿಸಿ, ಜೀವನೋಪಾಯ ಕಲ್ಪಿಸುತ್ತಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಣ್ಣ ಎಲ್. ಲಕ್ಕಣ್ಣವರ ಹೇಳಿದರು. ವಿಜಯಪುರು ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ಆಯೋಜಿಸಿದ ವಿಶ್ವ ಹಾಲು ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಾಲು ಒಂದು ಸಂಪೂರ್ಣ ಆಹಾರ, ಹಾಲಿನಲ್ಲಿ ಮನುಷ್ಯನ ದೇಹಕ್ಕೆ ಬೇಕಾಗಿರುವಂತಹ ಬಹುತೇಕ ಎಲ್ಲ […]
ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ಪ್ರೊ. ಪ್ರವೀಣ ಶಹಾಪುರ ಈಗ ಶ್ರೀ ರಾಜೀವ ಗಾಂಧಿ ವೈದ್ಯಕೀಯ ವಿವಿಗೆ ನಾಮನಿರ್ದೇಶನ
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರವೀಣ ಶಹಾಪುರ ಅವರನ್ನು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಗೆ ನಾಮನಿರ್ದೇಶನ ಮಾಡಲಾಗಿದೆ. ಬಿ. ಎಲ್. ಡಿ. ಇ ವೈದ್ಯಕೀಯ ಕಾಲೇಜಿನಲ್ಲಿ ಮೈಕ್ರೋಬಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಪ್ರವೀಣ ಶಹಾಪುರ ಅವರನ್ನು ನೇಮಕ ಮಾಡಿ ಆರೋಗ್ಯ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಶನಿವಾರ ಸಚಿವ ಎಂ. ಬಿ. ಪಾಟೀಲ ಬಸವ ನಾಡಿಗೆ ಆಗಮನ- ಭರ್ಜರಿ ಸ್ವಾಗತಕ್ಕೆ ಸಜ್ಜಾದ ತವರು ಜಿಲ್ಲೆಯ ಜನರು
ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಜೂನ್ 3 ರಂದು ಶನಿವಾರ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಚಿವರ ಅಭಿಮಾನಿಗಳು, ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ವಿಜಯಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿ, ಎಂ.ಬಿ.ಪಾಟೀಲರು ಜಲಸಂಪನ್ಮೂಲ ಸಚಿವರಾಗಿ ಜಿಲ್ಲೆಯಲ್ಲಿ […]