ರಾಜ್ಯದ ಇತರೆಡೆ ಕೈಗಾರಿಕೆ ಸ್ಥಾಪಿಸಲು ಉತ್ತೇಜನ ನೀಡುತ್ತೇವೆ- ನಾಡನ್ನು ಸರ್ವಜನಾಂಗದ ಶಾಂತಿ ತೋಟ ಮಾಡುತ್ತೇವೆ- ಎಂ. ಬಿ. ಪಾಟೀಲ

ವಿಜಯಪುರ, ಜೂನ್ 03: ಬೆಂಗಳೂರು ಜೊತೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಕೈಗಾರಿಕೆಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿ ಬೃಹತ ರೋಡ್ ಶೋನಲ್ಲಿ ಪಾಲ್ಗೊಂಡ ಬಳಿಕ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದ ಇತರೆಡೆ ಕೈಗಾರಿಕೆಗಳನ್ನು ಸ್ಥಾಪಿಸುವುದರಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಲಿದೆ. ಯುವಕರಿಗೆ […]

ಸಚಿವರಾದ ನಂತರ ತವರಿಗೆ ಬಂದ ಎಂ. ಬಿ. ಪಾಟೀಲರಿಗೆ ಅದ್ದೂರಿ ಸ್ವಾಗತ ನೀಡಿದ ಬಸವ ನಾಡಿನ ಜನತೆ

ವಿಜಯಪುರ: ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರಿಗೆ ವಿಜಯಪುರ ನಗರದಲ್ಲಿ ಭರ್ಜರಿ ಸ್ವಾಗತ ನೀಡಲಾಯಿತು. ನಗರದ ಗುರುಪಾದೇಶ್ವರ ನಗರದಲ್ಲಿರುವ ತೋಂಟದಾರ್ಯ ಶಾಖಾ ಮಠಕ್ಕೆ ಭೇಟಿ ನೀಡಿದ ಅವರು, ಗದಗ-ಡಂಬಳ-ಯಡಿಯೂರು ಮಠದ ಜಗದ್ಗುರುಗಳಾದ ಡಾ. ಸಿದ್ದರಾಮ ಮಹಾಸ್ವಾಮಿಗಳು ಮತ್ತು ವಿಜಯಪುರ ಷಣ್ಮುಖಾರೂಡ ಮಠದ ಶ್ರೀ ಅಭಿನವ ಸಿದ್ದಾರೂಢ ಮಹಾಸ್ವಾಮಿಜಿ ಅವರನ್ನು ಗೌರವಿಸಿ ಆಶೀರ್ವಾದ ಪಡೆದರು. […]

ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸರಕಾರಿ ಶಾಲೆ ಮಕ್ಕಳಿಗೆ ಶೈಕ್ಷಣಿಕ ಪ್ರವಾಸ ವ್ಯವಸ್ಥೆ ಮಾಡಿದ ಡಿಸಿ, ಸಿಇಓ

ವಿಜಯಪುರ: ಇಂದಿನ ಸ್ಪರ್ಧಾತ್ಮಕ ಮತ್ತು ವೇಗದ ಯುಗದಲ್ಲಿ ಪ್ರತಿಯೊಂದು ಮಾಹಿತಿಯ ಅರಿವು ಅತ್ಯವಶ್ಯಕ.  ಈ ಎಲ್ಲ ಮಾಹಿತಿ ಶಿಕ್ಷಣದಿಂದ ಮಾತ್ರ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದ್ದಾರೆ. ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಉನ್ನತ ದರ್ಜೆಯಲ್ಲಿ ಪಾಸಾದ 60 ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾದ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಜಿ. ಪಂ. ಸಭಾಂಗಣದಲ್ಲಿ ಜಿ. ಪಂ. ಸಿಇಓ ರಾಹುಲ್ ಶಿಂಧೆ ಅವರೊಂದಿಗೆ ಮಕ್ಕಳಿಗೆ ಪ್ರವಾಸ್ ಕಿಟ್ ನೀಡಿ ಕಾರ್ಯಕ್ರಮಕ್ಕೆ […]