ಬೆಳೆಗಳಲ್ಲಿ ರೈತರು ಎಂ. ಬಿ. ಪಾಟೀಲರನ್ನು ಕಾಣುತ್ತಿರುವುದಾಗಿ ಹೆಮ್ಮೆಯಿಂದ ಹೇಳುತ್ತಿದ್ದಾರೆ- ಶ್ರೀ ಬಸವಾನಂದ ಸ್ವಾಮೀಜಿ

ವಿಜಯಪುರ: ರೈತರು ಬೆಳೆಯುವ ಬೆಳೆಗಳಲ್ಲಿ ಎಂ. ಬಿ. ಪಾಟೀಲರನ್ನು ಕಾಣುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳುತ್ತಾರೆ.  ಇದು ಎಂ. ಬಿ. ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದಾಗ ಈ ಭಾಗದಲ್ಲಿ ನೀರಾವರಿ ಕ್ಷೇತ್ರದಲ್ಲಿ ಮಾಡಿರುವ ಜಲಕ್ರಾಂತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಾನಂದ ಸ್ವಾಮೀಜಿ ಹೇಳಿದ್ದಾರೆ. ಜ್ಞಾನಯೋಗಾಶ್ರಮದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರನ್ನು ಆಶೀರ್ವದಿಸಿ ಮಾತನಾಡಿದರು. […]

ಡೋಮನಾಳ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟ ನಾಗಠಾಣ ಶಾಸಕ ವಿಠ್ಠಲ ಧೋ. ಕಟಕದೊಂಡ

ವಿಜಯಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾಗಠಾಣ(ಮೀ) ಕಾಂಗ್ರೆಸ್ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ ಡೋಮನಾಳ ಗ್ರಾಮದ ದಾವಲಮಲೀಕ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಶಾಸಕರು, ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ.  1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು […]

ಜಲ ಬಿರಾದಾರಿ ವತಿಯಿಂದ ಶ್ರಮದಾನ, ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ವಿಜಯಪುರ: ನಗರದ ಬಾಗಲಕೋಟ್ ರಸ್ತೆಯಲ್ಲಿರುವ ಅನಾಥಾಶ್ರಮದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಜಯಪುರ ಜಲ ಬಿರಾದರಿ ವತಿಯಿಂದ ಶ್ರಮದಾನ ಮತ್ತು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಜಲ ಬಿರಾದರಿ ಜಿಲ್ಲಾಧ್ಯಕ್ಷ ಪೀಟರ್ ಅಲೆಕ್ಸಾಂಡರ್ ಅವರು ಜಲ ಬಿರಾದರಿಯಿಂದ ಸಂಗ್ರಹಿಸಿಟ್ಟ 101ನದಿಗಳ ನೀರಿನಿಂದ ಪಂಚ ಭೂತಗಳಾದ ಬೆಂಕಿ, ನೀರು, ಗಾಳಿ, ಪೃಥ್ವಿ, ಆಕಾಶ, ಇವುಗಳಿಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಿದರು.  ಅಲ್ಲದೇ, ಸಸಿ ನೆಟ್ಟರು. ಬಳಿಕ ಮಾತನಾಡಿದ ಅವರು, ಇಂದು ಮನುಷ್ಯನ […]

ಶ್ರೀ ರುಕ್ಮಾಂಗದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷ ದತ್ತು ಯೋಜನೆಗೆ ಚಾಲನೆ

ವಿಜಯಪುರ: ನಗರದ ಶ್ರೀ ರುಕ್ಮಾಂಗದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಂದ ವೃಕ್ಷ ದತ್ತು ಯೋಜನೆ ಪ್ರಾರಂಭಿಸಲಾಗಿದೆ.  ಈ ಯೋಜನೆಯಂತೆ ವಿದ್ಯಾರ್ಥಿಗಳು ಶಾಲೆಗೆ ಗಿಡಗಳನ್ನು ನೀಡಿ ಒಂದು ವರ್ಷಗಳ ಕಾಲ ಇವುಗಳನ್ನು ಪೋಷಣೆ ಮಾಡಲಿದ್ದಾರೆ.  ಈ ಯೋಜನೆಗೆ ವಿದ್ಯಾರ್ಥಿಗಳೇ ಚಾಲನೆ ನೀಡಿದ್ದು ಗಮನಾರ್ಹವಾಗಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಶಿಕ್ಷ ಆನಂದ ಕುಲಕರ್ಣಿ ಮಾತನಾಡಿ, ಇಂಥ ಯೋಜನೆಗಳು ಪರಿಸರದ ಬಗ್ಗೆ ಕಾಳಜಿಯನ್ನು ಹೆಚ್ಚಿಸುವುದರ ಜೊತೆಗೆ ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ.  ಮಕ್ಕಳಲ್ಲಿ ಪರಿಸರದ ಮೇಲೆ […]

ವಿದ್ಯುತ್ ದರ ಹೆಚ್ಚಳ, ಗೋಹತ್ಯೆ ನಿಷೇಧ ರದ್ದು ಕುರಿತು ಸಚಿವರ ಹೇಳಿಕೆ ಖಂಡಿಸಿ ಬಿಜೆಪಿಯಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ

ವಿಜಯಪುರ: ಉಚಿತ ವಿದ್ಯುತ್ ಗ್ಯಾರಂಟಿ ಎನ್ನುವ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಜನತೆಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕದ ಪದಾಧಿಕಾರಿಗಳು ಶ್ರೀ ಸಿದ್ದೇಶ್ವರ ದೇವಾಲಯದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ಪಶು ಸಂಗೋಪನೆ ಸಚಿವರು ರಾಜ್ಯದಲ್ಲಿ ವಯಸ್ಸಾದ ಹಸುಗಳನ್ನು ಸಾಕಲು ಕಷ್ಟವಾಗುತ್ತದೆ.  ಆದ್ದರಿಂದ ಗೋ ಹತ್ಯೆ ನಿಷೇಧ ಕಾನೂನನ್ನು ರದ್ದು ಮಾಡಿ ಗೋಹತ್ಯೆಗೆ […]