ವಿಜಯಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾಗಠಾಣ(ಮೀ) ಕಾಂಗ್ರೆಸ್ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ ಡೋಮನಾಳ ಗ್ರಾಮದ ದಾವಲಮಲೀಕ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು, ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ. 1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಅಭಿಯಾನವಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ, ವಾರ್ಷಿಕವಾಗಿ 143ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆ. ಪ್ರತಿ ವರ್ಷ, ವಿಶ್ವ ಪರಿಸರ ದಿನವು ಹೊಸ ವಿಷಯಗಳು ಒದಗಿಸಿದ್ದು, ಪ್ರಮುಖ ಸಂಸ್ಥೆಗಳು, ಎನ್‍ಜಿಒಗಳು, ಸಮುದಾಯಗಳು, ಸರ್ಕಾರಗಳು ಮತ್ತು ವಿಶ್ವಾದ್ಯಂತದ ಎಲ್ಲ ಪ್ರಸಿದ್ಧ ವ್ಯಕ್ತಿಗಳು ಪರಿಸರ ಕಾರಣಗಳನ್ನು ಪ್ರತಿಪಾದಿಸಲು ಅಳವಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಪರಿಸರ ಪ್ರೇಮಿ ನಾನಾಗೌಡ ಡಿ. ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಹಜಹಾನ್ ಮುಲ್ಲಾ, ಗುತ್ತಿಗೆದಾರ ಹಣಮಂತ ಚಿಂಚಲಿ, ಶಿಕ್ಷಕ ಪರನಗೌಡ ಪಾಟೀಲ, ಬಸನಗೌಡ ಪಾಟೀಲ, ಸುರೇಶಗೌಡ ಪಾಟೀಲ, ರಮೇಶಗೌಡ ಪಾಟೀಲ, ಆನಂದ ಬಂಡಿ, ಶಿವನಗೌಡ ಪಾಟೀಲ, ಸಿದ್ದಣ್ಣಗೌಡ ಪಾಟೀಲ, ಮಲ್ಲಿಕಾರ್ಜುನ ಐರಸಂಗ, ಪ್ರಕಾಶ ಬಂಡಿ, ಶಂಕರ ಗಂಟಿ, ವಿಷ್ಣು ಮಾದರ, ಜಗನ್ನಾಥ ಪವಾರ, ವಸಂತ ರಾಠೋಡ, ಧರೆಪ್ಪ ಅರ್ಧಾವೂರ ಹಾಗೂ ಡೋಮನಾಳ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.