ಅಧಿಕಾರಿಗಳು ವಿಜಯಪುರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸಬೇಕು- ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ –

ವಿಜಯಪುರ: ಜಿಲ್ಲೆಯ ಮಕ್ಕಳಿಗೆ ಉತ್ಕೃಷ್ಣ, ಗುಣಮಟ್ಟವಾದ ಶಿಕ್ಷಣ, ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಮಕ್ಕಳ ಆರೋಗ್ಯ ಕಾಳಜಿ, ತ್ಯಾಜ್ಯ ನಿರ್ವಹಣೆ, ನಗರದ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ ಸೂಚನೆ ನೀಡಿದ್ದಾರೆ.  ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲೆಯ ನಾನಾ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ […]

ವೈದ್ಯಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಮುಖ್ಯ- ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಬಾಗಲಕೋಟೆ: ವೈದ್ಯಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಮುಖ್ಯವಾಗಿದೆ.  ಬಡವ ಮತ್ತು ಶ್ರೀಮಂತ ಎಂಬ ಯಾವುದೇ ಭೇದಭಾವವಿಲ್ಲದೇ ಸೇವಾ ಮನೋಭಾವದಿಂದ ಕೆಲಸ ಮಾಡುವುದು ನಿಜವಾದ ಕರ್ತವ್ಯವಾಗಿದೆ ಎಂದು ಬೀದರ ದಕ್ಷೀಣ ಶಾಸಕ ಡಾ. ಶೈಲೆಂದ್ರ ಬೆಲ್ದಾಳೆ ಹೇಳಿದರು. ನಗರದ ಬಿ. ವಿ. ವಿ. ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜುಗಳು ಒಳ್ಳೆಯ ಪ್ರವೃತ್ತಿ ಬೆಳೆಸುವ ಕೇಂದ್ರಗಳಾಗಬೇಕು.  ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪದವಿಯ ಹಂತ ಅತ್ಯಂತ ಪ್ರಮುಖವಾಗಿದೆ.  ಬಸವೇಶ್ವರ ವೀರಶೈವ ವಿದ್ಯಾವರ್ಧಕ […]

ಮಹಿಳಾ ಸಿಸ್ಟೊಬಾಲ್ ವಿಶ್ವಕಪ್ ನಲ್ಲಿ ಭಾರತ ರನ್ನರ್ ಅಪ್- ರಾಷ್ರ್ಟೀಯ ತಂಡದಲ್ಲಿ ಆಡಿದ ಮಹಿಳಾ ವಿವಿಯ ಶೃತಿ ಟಿ. ಎಸ್.

ವಿಜಯಪುರ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮೊದಲ ಮಹಿಳಾ ಸಿಸ್ಟೋಬಾಲ್ ವಿಶ್ವಕಪ್‍ನಲ್ಲಿ ಭಾರತೀಯ ವನಿತೆಯರ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.  ಈ ತಂಡದಲ್ಲಿದ್ದ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ಶೃತಿ ಟಿ. ಎಸ್. ಅತ್ಯುತ್ತಮ ಪ್ರದರ್ಶನ ತೋರಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.  ಮೇ ತಿಂಗಳ ಕೊನೆಯ ವಾರದಲ್ಲಿ ನಡೆದ ಸಿಸ್ಟೋಬಾರ್ ವಿಶ್ವಕಪ್‍ನಲ್ಲಿ ಭಾರತ, ಶ್ರೀಲಂಕಾ ಅರ್ಜೆಂಟೀನಾ, ಬಾಂಗ್ಲಾ, ಭೂತಾನ ಮತ್ತು ಪ್ರಾನ್ಸ್ ದೇಶಗಳು ಭಾಗವಹಿಸಿದ್ದವು.  ಈ ಸ್ಪರ್ಧೆಯಲ್ಲಿ […]