ಕಾಖಂಡಕಿಯಲ್ಲಿ ಕಾರಹುಣ್ಣಿಕೆ ಕರಿ ಹರಿಯುವ ಕಾರ್ಯಕ್ರಮ- ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಶನಿವಾರ ಕಾಖಂಡಕಿ ಗ್ರಾಮದಲ್ಲಿ ಕಾರಹುಣ್ಣಿಮೆ ಕರಿ ಹರಿಯುವ ಕಾರ್ಯಕ್ರಮದಲ್ಲಿ ಎತ್ತುಗಳ ತಿವಿತದಿಂದ ಪೆಟ್ಟಾಗಿರುವ ಗಾಯಾಳುಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. 

ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿದ ಅವರು, ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಅಲ್ಲದೇ, ಬೇಗ ಗುಣಮುಖರಾಗಿ ಎಂದು ಶುಭ ಹಾರೈಸಿದರು.

ಸಚಿವ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ವೈದ್ಯರು, ಕಾಖಂಡಕಿ ಘಟನೆಯಲ್ಲಿ ಏಳು ಜನ ಗಾಯಗೊಂಡಿದ್ದು, ಓರ್ವರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಆರು ಜನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಆಗ ಸಚಿವ ಎಂ. ಬಿ. ಪಾಟೀಲ ಮಾತನಾಡಿ ಗಾಯಾಳುಗಳಿಗೆ ಅಗತ್ಯವಾಗಿರುವ ಎಲ್ಲ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು‌.

ಈ ವೇಳೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ.‌ ದಾನಮ್ಮನವರ, ಜಿ. ಪಂ. ಸಿಇಓ ರಾಹುಲ ಶಿಂಧೆ, ಎಸ್ಪಿ ಎಚ್. ಡಿ. ಆನಂದಕುಮಾರ, ಸಿಎಂಓ ಡಾ. ಸುರೇಶ ಚವ್ಹಾಣ, ಆರ್ ಎಂ ಓ  ಎ. ಜಿ. ಬಿರಾದಾರ‌, ಅಬ್ದುಲ್ ಹಮೀದ್ ಮುಶ್ರಿಫ್ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌