ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ ಪತ್ರಕರ್ತರು- ನಾನಾ ಬೇಡಿಕೆ ಈಡೇರಿಸಲು ಮನವಿ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕಾನಿಪ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು.

ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ರೂ. 500 ಕೋ. ಅನುದಾನವನ್ನು ಮೀಸಲಿಡುವುದಾಗಿ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.  ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ,  ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು, ಮನವಿ ಪತ್ರ ಸಲ್ಲಿಸಿದರು.

ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಕಾನಿಪ ಪದಾಧಿಕಾರಿಗಳು

 

 

 

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಮನವಿಯಲ್ಲಿರುವ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ಜೆ. ಸಿ. ಲೋಕೇಶ, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಜಿಲ್ಲಾ ಪದಾಧಿಕಾರಿಗಳಾದ ದಿನೇಶ ಗೌಡಗೆರೆ, ಶಿವಕುಮಾರ ಸ್ವಾಮಿ, ಚಲುವರಾಜು, ಸಿ. ಎನ್. ಕುಮಾರ, ಸೋಮಶೇಖರ ಗಾಂಧಿ, ಜುಕ್ರಿಯಾ, ರಾಜು, ರಾಯಚೂರು ವೀರಾ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌