ವಿಜಯಪುರ: ನೂತನ ತಾಲೂಕು ಕೇಂದ್ರವಾಗಿರುವ ಆಲಮೇಲದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಹಸೀಲ್ದಾರಗೆ ಸೂಚನೆ ನೀಡಿದ್ದಾರೆ.
ಆಲಮೇಲದ ರಾಯಲ್ ಫಂಕ್ಷನ್ ಹಾಲ್‍ನಲ್ಲಿ ನಡೆದ ಮೀಸಲಾತಿ ನಿಗದಿ ಸಭೆಯ ನಂತರ ಆಲಮೇಲ ನಗರದಲ್ಲಿ ಮಿನಿ ವಿಧಾನಸೌಧ ನಿರ್ಮಾಣದ ಉದ್ದೇಶಿತ ಸ್ಥಳಕ್ಕೆಅವರು ಸಿಂದಗಿ ಶಾಸಕ ಅಶೋಕ ಮನಗೂಳಿ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಯುಕೆಪಿ ಕ್ವಾಟರ್ಸ್ ಸರ್ವೆ ನಂಬರ್ 606ರಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಡಿಸಿ ಅವರು ತಹಸೀಲ್ದಾರ ಸುರೇಶ ಚವಲರ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡದೆ, ತಾಲುಕು ಪಂಚಾಯಿತಿ ಕಾರ್ಯ ನಿರ್ವಾಹಕ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.