ಜೂ. 20 ರಂದು ವಿಜಯಪುರದಲ್ಲಿ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಚರ್ಚೆ ಕುರಿತು ಪೂರ್ವಭಾವಿ ಸಭೆ

ವಿಜಯಪುರ: ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ಜೂ. 20 ರಂದು ಮಂಗಳವಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಎಂದು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ. ಕೆ. ಎಚ್. ಮುಂಬಾರಡ್ಡಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜೂ. 20 ರಂದು ಬೆ. 11ಕ್ಕೆ ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಹತ್ತಿರದ ಕನಕದಾಸ ಬಡಾವಣೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯಲ್ಲಿ ಒಣ ದ್ರಾಕ್ಷಿ ಸಮಸ್ಯೆ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಡಾ. ಕೆ. ಎಚ್. ಮುಂಬಾರೆಡ್ಡಿ

ಮಾರುಕಟ್ಟೆಯಲ್ಲಿ ಒಣದ್ರಾಕ್ಷಿ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ದ್ರಾಕ್ಷಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.  ಈ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ.  ಆದ್ದರಿಂದ ಎಲ್ಲಾ ರೈತ ಬಾಂಧವರು ಈ ಸಭೆಯಲ್ಲಿ ಪಾಲ್ಗೊಂಡು ದ್ರಾಕ್ಷಿ ಬೆಳೆ ಮತ್ತು ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳನ್ನು ಚರ್ಚಿಸಿ ಸರಕಾರ ಹಾಗೂ ಸಂಬಂಧಿಸಿದ ಇಲಾಖೆಯ ಗಮನ ಸೆಳೆಯುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ. ಕೆ. ಎಚ್. ಮುಂಬಾರಡ್ಡಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌