ಜುಲೈ 2ರಂದು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಪೂರ್ವಭಾವಿ ಸಭೆ

ವಿಜಯಪುರ: ಜಿಲ್ಲಾಡಳಿತ ವತಿಯಿಂದ ಜುಲೈ 2ರಂದು ವಚನಫಿತಾಮಹ ಡಾ. ಫ. ಗು. ಹಳಕಟ್ಟಿ ಅವರ ರಾಜ್ಯ ಮಟ್ಟದ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣೆ ದಿನ ಅಂಗವಾಗಿ ಅತ್ಯಂತ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜುಲೈ 2ರಂದು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ […]

ಮಕ್ಕಳಿಗಾಗಿ ಹಗಲಿರುಳು ದುಡಿಯುವ ತಂದೆಗೆ ಎಷ್ಟೇ ಕೃತಜ್ಞತೆ ಸಲ್ಲಿಸಿದರೂ ಕಡಿಮೆ- ಶಿವಾಜಿ ಗಾಯಕವಾಡ

ವಿಜಯಪುರ: ಮಕ್ಕಳಿಗಾಗಿ ಹಗಲಿರುಳು ದುಡಿದು ಮಕ್ಕಳ ಭವಿಷ್ಯ ಉಜ್ವಲಗೊಳಿಸುವ ತಂದೆ. ತನ್ನ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಕುಟುಂಬದ ಅಭ್ಯುದಯಕ್ಕೆ ಶ್ರಮಿಸುತ್ತಾನೆ ಎಂದು ನಗರದ ಪ್ರತಿಷ್ಠಿತ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿ ಅಧ್ಯಕ್ಷ ಶಿವಾಜಿ ಗಾಯಕವಾಡ ಹೇಳಿದ್ದಾರೆ. ರವೀಂದ್ರನಾಥ ಠಾಗೋರ ಶಾಲೆಯಲ್ಲಿ ನಡೆದ ಫಾದರ್ಸ್ ಡೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂದೆ ಮತ್ತು ಮಕ್ಕಳ ಪ್ರೀತಿ ವರ್ಣಿಸಲಸದಳ.  ತಂದೆಯ ಬಗ್ಗೆ ಎಷ್ಟೇ ಹೇಳಿದರೂ ಕಡಿಮೆ ಎಂದು ಅವರು ಹೇಳಿದರು.     ಶಾಲೆಯ ಪ್ರಿನ್ಸಿಪಾಲ್ […]

30 ವರ್ಷದ ವ್ಯಕ್ತಿಗೆ 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ ಮಾಡಿದ ವೈದ್ಯರು- ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ

ಬೆಂಗಳೂರು: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡಗಳನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ರೋಬೋಟಿಕ್‌ ಎನ್‌-ಬ್ಲಾಕ್‌ ವಿಧಾನದ ಮೂಲಕ ವೈದ್ಯರು ಕಸಿ  ಮಾಡುವಲ್ಲಿ ಯಶಸ್ವಿಯಾದ ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.    ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ. ಶ್ರೀಹರ್ಷ ಹರಿನಾಥ ಅವರನ್ನೊಳಗೊಂಡ ತಜ್ಞವೈದ್ಯರ ತಂಡ ಈ ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿ ಗಮನ ಸಳೆದಿದೆ. ಈ ಕುರಿತು ಮಾತನಾಡಿದ ಡಾ. […]

ಗೋವುಗಳ ಗಣಿಯಾಗಲಿ- ಲದ್ದಿಜೀವಿಗಳ ಮೂಲಕ ರಚಿಸಿದ ಪಠ್ಯಕ್ರಮವನ್ನು ಬುದ್ದಿಜೀವಿಗಳ ಮೂಲಕ ತಿದ್ದುವ ಕೆಲಸ ನಡೆದಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಗೋವುಗಳ ಗಣತಿ ನಡೆಯಬೇಕು.  ಯಾವ ಆರ್‌ ಎಸ್‌ ಎಸ್ ನಾಯಕರು ಗೋವುಗಳನ್ನು ಪೋಷಿಸುತ್ತಿದ್ದಾರೆ? ಗೋವುಗಳನ್ನು ಹೇಗೆ ಸಾಕುತ್ತಿದ್ದಾರೆ ಎಂಬ ಬಗ್ಗೆಯೂ ಗಣತಿ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಿಜವಾಗಿಯೂ ಗೋವುಗಳಿಗೆ ಕಾಳಜಿ ಇದ್ದರೆ ಕೂಡಲೇ ಗೋಮುಕ್ತಿ ಕಾನೂನು ಜಾರಿಗೊಳಿಸಿ ಅನುಷ್ಠಾನಗೊಳಿಸಬೇಕು.  ಗೋವುಗಳ ರಕ್ಷಣೆ ಬಗ್ಗೆ ಮಾತನಾಡುವ ಅನೇಕರು ಕೋವಿಡ್ ಸಂದರ್ಭದಲ್ಲಿ ತಮ್ಮ ಸಂಬಂಧಿಕರ ಅಂತ್ಯಕ್ರಿಯೆ ಮಾಡಲಿಲ್ಲ.  ಗೋವುಗಳನ್ನು ಸಾಕಲು ಬಾರದವರು, ಗೋವುಗಳನ್ನು […]