ಜುಲೈ 2ರಂದು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಪೂರ್ವಭಾವಿ ಸಭೆ

ವಿಜಯಪುರ: ಜಿಲ್ಲಾಡಳಿತ ವತಿಯಿಂದ ಜುಲೈ 2ರಂದು ವಚನಫಿತಾಮಹ ಡಾ. ಫ. ಗು. ಹಳಕಟ್ಟಿ ಅವರ ರಾಜ್ಯ ಮಟ್ಟದ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣೆ ದಿನ ಅಂಗವಾಗಿ ಅತ್ಯಂತ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದ್ದಾರೆ. 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜುಲೈ 2ರಂದು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಬೆ. 9ಕ್ಕೆ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದಲ್ಲಿ, ಬಿ. ಎಲ್. ಡಿ. ಇ ಎಂಜಿನೀಯರಿಂಗ್ ಕಾಲೇಜ್ ಹಾಗೂ ಸಿದ್ದೇಶ್ವರ ಬ್ಯಾಂಕ್ ಆವರಣದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ನಡೆಯಲಿದೆ.  ನಂತರ ಬೆ. 10.30ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜನ್ಮದಿನ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ. ಎಸ್. ಐ. ಮೇತ್ರಿ ಮತ್ತು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದ ಕಾರ್ಯದರ್ಶಿ ಡಾ. ಎಂ. ಎಸ್. ಮದಭಾವಿ ಅವರಿಂದ ಡಾ. ಫ. ಗು. ಹಳಕಟ್ಟಿ ಅವರ ಬದುಕು ಬರಹ ಮತ್ತು ವಚನ ಸಾಹಿತ್ಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.  ಈ ಕಾರ್ಯಕ್ರಮದಲ್ಲಿ ಡಾ. ಫ. ಗು. ಹಳಕಟ್ಟಿ ಅವರೊಂದಿಗೆ ಕಾರ್ಯ ನಿರ್ವಹಿಸಿದ ಹಿರಿಯ ಸಾಹಿತಿ ಮಹಾಂತ ಗುಲಗಂಜಿ ಅವರಿಗೆ ಗೌರವ ಸನ್ಮಾನ ನಡೆಯಲಿದೆ.  ಅಲ್ಲದೇ, ಡಾ. ಫ. ಗು. ಹಳಕಟ್ಟಿ ಅವರ ಕುಟುಂಬ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜನ್ಮದಿನಾಚರಣೆ ಕುರಿತು ಡಿಸಿ ಕಚೇರಿಯಲ್ಲಿ ಡಾ. ದಾನಮ್ಮನವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು

ವಚನ ಸಂಗೀತ, ವಚನ ಗೀತ ಗಾಯನ, ವಚನ ವೈಭವ ನೃತ್ಯ ರೂಪಕ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ವೇದಿಕೆ ವಿನ್ಯಾಸ, ಆಮಂತ್ರಣ ಪತ್ರಿಕೆ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಉಟೋಪಚಾರ ವ್ಯವಸ್ಥೆ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ, ಬಿ. ಎಂ. ನೂಲ್ವಿ, ಆನಂದ ಹುಲಮನಿ, ಸಂತೋಷ ಬಂಡೆ, ನಾಗೇಶ ಭಾವಿಕಟ್ಟಿ, ಡಾ. ಸಂಗಮೇಶ ಮೇತ್ರಿ, ಗುರು ಬರಗಲ, ಎಸ್. ಬಿ. ಜಾಲವಾದಿ, ಐ. ಎನ್. ಉಡಚಣ, ಭೀಮರಾಯ ಜಿಗಜಿಣಗಿ, ಡಾ. ವಿ. ಡಿ. ಐಹೊಳ್ಳಿ, ಗಿರೀಶ ಕುಲಕರ್ಣಿ, ಸೋಮನಗೌಡ ಕಲ್ಲೂರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌