ಯೋಗಾಭ್ಯಾಸ ಆರೋಗ್ಯ ವೃದ್ದಿಗೆ ಸಹಕಾರಿಯಾಗಿದೆ: ನ್ಯಾಯಾಧೀಶ ನಲವಡೆ
ವಿಜಯಪುರ: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳುವುದಲ್ಲದೇ, ಸದೃಢ ಆರೋಗ್ಯ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಎ. ನಲವಡೆ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಸಂತೋಷ ಎಸ್. ಕುಂದರ, ವಕೀಲರ ಸಂಘದ ಅಧ್ಯಕ್ಷ ಐ. […]
ಜೀವನದಲ್ಲಿ ಯೋಗ ರೂಢಿಸಿಕೊಂಡು ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು- ಸಂಸದ ರಮೇಶ ಜಿಗಜಿಣಗಿ ಕರೆ
ವಿಜಯಪುರ: ದೇಶದ ಋಷಿ ಮುನಿಗಳಿಂದ ಕೊಡುಗೆಯಾಗಿ ಬಂದ ಬಹು ಪುರಾತನವಾದ ಯೋಗವನ್ನು ಪ್ರತಿಯೊಬ್ಬರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸದೃಢ ಆರೋಗ್ಯ ಹೊಂದುವ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು […]
ಇಂಡಿ ತಾಲೂಕಿನ ನಾನಾ ಕಡೆ ಕುಡಿಯುವ ನೀರು ಪೂರೈಕೆ ಪರಿಶೀಲನೆ ನಡೆಸಿದ ಸಿಇಓ ರಾಹುಲ ಶಿಂಧೆ- ಸಮರ್ಸೂಕ ನಿರೋದಗಿಸಲು ಅಧಿಕಾರಿಗಳಿಗೆ ಸೂಚನೆ
ವಿಜಯಪುರ: ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಕುಡಿಯುವ ನೀರಿನ ಕುರಿತು ಪರಿಶೀಲನೆ ನಡೆಸಿ, ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂಡಿ ತಾಲೂಕಿನ ಬಸನಾಳ ಗ್ರಾಮ ಪಂಚಾಯಿತಿಯ ಮುಲ್ಲಾ ವಸ್ತಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿ, ಅಲ್ಲಿಯ ಸಾರ್ವಜನಿಕರ ಮನವಿಯ ಮೇರೆಗೆ ಮುಲ್ಲಾ ವಸ್ತಿಗೆ ಗ್ರಾಮದ […]
ಆರತಿ ಬೆಳಗಿ, ಕುಂಬಳಕಾಯಿ ಒಡೆದು ಪಿಎಸ್ಐ ಸ್ವಾಗತಿಸಿದ ಅಭಿಮಾನಿಗಳು- ಚಡಚಣಕ್ಕೆ ಬಂದ ಮಹಾದೇವ ಯಲಿಗಾರಗೆ ವಿನೂತನ ಗೌರವ
ವಿಜಯಪುರ: ಪೊಲೀಸ್ ಠಾಣೆಗೆ ಮೂರನೇ ಬಾರಿ ವರ್ಗವಾಗಿ ಬಂದ ಪಿ.ಎಸ್.ಐ ಯನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿ ವಿನೂತನ ರೀತಿಯಲ್ಲಿ ರೀತಿಯಲ್ಲಿ ಸ್ವಾಗತಿಸಿದ ಅಪರೂಪದ ವೆಲ್ ಕಮ್ ಕಾರ್ಯಕ್ರಮ ಭೀಮಾ ತೀರದ ಚಡಚಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಿ.ಎಸ್.ಐ. ಮಹಾದೇವ ಯಲಿಗಾರ 3ನೇ ಬಾರಿಗೆ ಚಡಚಣ ಪೊಲೀಸ್ ಠಾಣೆಗೆ ಪಿ.ಎಸ್.ಐ ಆಗಿ ವರ್ಗಾವಣೆಯಾಗಿ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಚಡಚಣ ಪಟ್ಟಣದ ಅವರ ಅಭಿಮಾನಿಗಳು ಮತ್ತು ಪಟ್ಟಣದ ನಿವಾಸಿಗಳು ಐಬಿಯಿಂದ ಪೊಲೀಸ್ ಠಾಣೆಯವರೆಗೆ ಮೆರವಣಿಗೆಯಲ್ಲಿ ಕರೆತಂದು ಅಭಿಮಾನ ತೋರಿದರು. […]
ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿಗೆ ಟೈಮ್ಸ್ ಸರ್ವೆಯಲ್ಲಿ ದೇಶದ 37ನೇ, ರಾಜ್ಯದ 5ನೇ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜು ಸ್ಥಾನ
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿAಗ್ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ 37ನೇ ಮತ್ತು ರಾಜ್ಯ ಮಟ್ಟದಲ್ಲಿ 5ನೇ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜು ರ‍್ಯಾಂಕ ದೊರೆತಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ, ಟಾಯಿಮ್ಸ್ ಆಫ್ ಇಂಡಿಯಾ ನಡೆಸಿದ ಪ್ರತಿಷ್ಠಿತ ಟೈಮ್ಸ್ ಎಂಜಿನಿಯರಿAಗ್ ಸರ್ವೆ- 2023ರ ಸಮೀಕ್ಷೆಯಲ್ಲಿ ಬಿ.ಎಲ್.ಡಿ.ಇ ಎಂಜಿನಿಯರಿAಗ್ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ 37ನೇ, ರಾಜ್ಯ […]
ಯೋಗ ಜೀವನ ಪದ್ಧತಿಯಾಗಿದೆ- ಪ್ರತಿದಿನ ಮಾಡುವುದರಿಂದ ಉತ್ತಮ ದೈಹಿಕ, ಮಾನಸಿಕ ಆರೋಗ್ಯ ಸಾಧ್ಯ- ಪ್ರೊ. ವೈ. ಎನ್. ಜಯರಾಜ
ವಿಜಯಪುರ: ಯೋಗ ಅಲೋಪಥಿ, ಹೋಮಿಯೋಪಥಿ, ಆಯುರ್ವೇದ ಯಾವುದೂ ಅಲ್ಲ. ಇದು ಜೀವನದ ವಿಧಾನವಾಗಿದೆ ಎಂದು ವೂ ಅಲ್ಲಇದು ಜೀವನದ ವಿಧಾನವಾಗಿದೆ ಎಂದು ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕಲಾಧಿಪತಿ ಪ್ರೊ. ವೈ. ಎನ್. ಜಯರಾಜ ಹೇಳಿದ್ದಾರೆ. ವಿಶ್ವವಿದ್ಯಾಲಯದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಗಾಟಿಸಿ ಅವರು ಮಾತನಾಡಿದರು. ಸದೃಢ ದೇಹ ಮತ್ತು ಮನಸ್ಸು ಮನುಷ್ಯನನ್ನು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತ ಮತ್ತು ಬುದ್ದಿವಂತನನ್ನಾಗಿ ಮಾಡುತ್ತದೆ. 21ನೇ ಶತಮಾನದಲ್ಲಿ ಇದರ ಅಗತ್ಯ ಹೆಚ್ಚಾಗಿದೆ. ಭಾರತದ ಯೋಗ […]