ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿAಗ್ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ 37ನೇ ಮತ್ತು ರಾಜ್ಯ ಮಟ್ಟದಲ್ಲಿ 5ನೇ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜು ರ‍್ಯಾಂಕ ದೊರೆತಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ, ಟಾಯಿಮ್ಸ್ ಆಫ್ ಇಂಡಿಯಾ ನಡೆಸಿದ ಪ್ರತಿಷ್ಠಿತ ಟೈಮ್ಸ್ ಎಂಜಿನಿಯರಿAಗ್ ಸರ್ವೆ- 2023ರ ಸಮೀಕ್ಷೆಯಲ್ಲಿ ಬಿ.ಎಲ್.ಡಿ.ಇ ಎಂಜಿನಿಯರಿAಗ್ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ 37ನೇ, ರಾಜ್ಯ ಮಟ್ಟದಲ್ಲಿ 5ನೇ ಅತ್ಯುತ್ತಮ ಎಂಜಿನಿಯರಿAಗ್ ಕಾಲೇಜು ರ‍್ಯಾಂಕ ಪಡೆದಿದೆ. ಅಲ್ಲದೇ, ದೇಶದ ಖಾಸಗಿ ಎಂಜಿನಿಯರಿAಗ್ ಕಾಲೇಜುಗಳಲ್ಲಿ 34ನೇ ರ‍್ಯಾಂಕ, ಪ್ಲೇಸಮೆಂಟ್ ನಲ್ಲಿ 47ನೇ ಅತ್ಯುತ್ತಮ ಎಂಜಿನಿಯರಿAಗ್ ಕಾಲೇಜು ರ‍್ಯಾಂಕ ಪಡೆದಿದೆ. ಇದೇ ಮೊದಲ ಬಾರಿಗೆ ಬಿ.ಎಲ್.ಡಿ.ಇ ಎಂಜಿನಿಯರಿAಗ್ ಕಾಲೇಜಿಗೆ ರಾಜ್ಯಮಟ್ಟದಲ್ಲಿ 5ನೇ ರ‍್ಯಾಂಕ ದೊರೆತಿದೆ. ಮಾತ್ರವಲ್ಲ, ದಕ್ಷಿಣ ಭಾರತದ ಅತ್ಯುತ್ತಮ 20 ಕಾಲೇಜುಗಳಲ್ಲಿಯೂ ಕಾಲೇಜು ಸ್ಥಾನ ಪಡೆದಿದೆ ಎಂದು ಅವರು ತಿಳಿಸಿದ್ದಾರೆ.
ಬಿ.ಎಲ್.ಡಿ.ಇ ಎಂಜಿನಿಯರಿAಗ್ ಕಾಲೇಜು ಕಳೆದ ನಾಲ್ಕು ದಶಕಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ನೀಡುವಲ್ಲಿ ಮುಂಚೂಣಿಯಲ್ಲಿದ್ದು, ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಿಸಲು ಎಲ್ಲ ಅತ್ಯಾಧುನಿಕ ಸೌಕರ್ಯಗಳನ್ನು ಒದಗಿಸುತ್ತಿದೆ. ಅಲ್ಲದೇ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಗತ್ಯಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ತಾಂತ್ರಿಕ ಶಿಕ್ಷಣವನ್ನು ಒದಗಿಸುತ್ತಿದೆ. ಅಲ್ಲದೇ, ಹೊಸ ಹೊಸ ಸಂಶೋಧನೆಗಳಿಗೂ ಪ್ರೋತ್ಸಾಹ ನೀಡುತ್ತಿದೆ. ಈ ಕಾಲೇಜಿನಲ್ಲಿ ಕಲಿತಿರುವ ಸಾವಿರಾರು ವಿದ್ಯಾರ್ಥಿಗಳು ಈಗಾಗಲೇ ಸ್ವಂತ ಉದ್ದಿಮೆ ಆರಂಭಿಸಿದ್ದರೆ, ಅವರಲ್ಲಿ ಹಲವಾರು ಜನರು ಬಹುರಾಷ್ಟಿಯ ಕಂಪನಿಗಳಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ, ಕೇಂದ್ರ ಮತ್ತು ರಾಜ್ಯ ಸರಕಾರಗಳ ನಾನಾ ವಿಭಾಗಗಳಲ್ಲಿ ಎಂಜಿನಿಯರ್ ಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಾಲೇಜಿನ ಸಾಧನೆ ಅತ್ಯುತ್ತಮವಾಗಿದ್ದು, ಕಾಲೇಜು ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಕಾಲೇಜಿನ ಈ ಸಾಧನೆಗೆ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಡಾ. ಎಂ. ಬಿ. ಪಾಟೀಲ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಬಿ.ಎಲ್.ಡಿ.ಇ ಸಂಸ್ಥೆಯ ಪ್ರೋತ್ಸಾಹ, ಕಾಲೇಜಿನ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಾಧನೆಯ ಫಲವಾಗಿ ರಾಷ್ಟ್ರೀಯ ಮಟ್ಟದಲ್ಲಿ ಕಾಲೇಜಿಗೆ ಉನ್ನತ ಸ್ಥಾನ ಲಭಿಸಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮರವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.