ಯೋಗಾಭ್ಯಾಸ ಆರೋಗ್ಯ ವೃದ್ದಿಗೆ ಸಹಕಾರಿಯಾಗಿದೆ: ನ್ಯಾಯಾಧೀಶ ನಲವಡೆ

ವಿಜಯಪುರ: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳುವುದಲ್ಲದೇ, ಸದೃಢ ಆರೋಗ್ಯ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಎ. ನಲವಡೆ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯಪುರ ನ್ಯಾಯಾಲಯ ಆವರಣದಲ್ಲಿ ನಡೆದ ಆಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನಾನಾ ನ್ಯಾಯಾಧೀಶರು, ನ್ಯಾಯವಾದಗಿಳು, ಇತರರು ಪಾಲ್ಗೋಂಡರು

ಈ ಕಾರ್ಯಕ್ರಮದಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಸಂತೋಷ ಎಸ್. ಕುಂದರ, ವಕೀಲರ ಸಂಘದ ಅಧ್ಯಕ್ಷ ಐ. ಜಿ. ಚಾಗಶೆಟ್ಟಿ, ನಾನಾ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌