ಇಂಡಿ ತಾಲೂಕಿನ ನಾನಾ ಕಡೆ ಕುಡಿಯುವ ನೀರು ಪೂರೈಕೆ ಪರಿಶೀಲನೆ ನಡೆಸಿದ ಸಿಇಓ ರಾಹುಲ ಶಿಂಧೆ- ಸಮರ್ಸೂಕ ನಿರೋದಗಿಸಲು ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಕುಡಿಯುವ ನೀರಿನ ಕುರಿತು ಪರಿಶೀಲನೆ ನಡೆಸಿ, ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂಡಿ ತಾಲೂಕಿನ ಬಸನಾಳ ಗ್ರಾಮ ಪಂಚಾಯಿತಿಯ ಮುಲ್ಲಾ ವಸ್ತಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿ, ಅಲ್ಲಿಯ ಸಾರ್ವಜನಿಕರ ಮನವಿಯ ಮೇರೆಗೆ ಮುಲ್ಲಾ ವಸ್ತಿಗೆ ಗ್ರಾಮದ ಕೆರೆಯಿಂದ ಹೊಸ ಪೈಪಲೈನ್ ಮಾಡಿಸಿ, ಕುಡಿಯುವ ನೀರು ಪೆÇರೈಸಲು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚನೆ ನೀಡಿದರು.

ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ ಇಂಡಿ ತಾಲೂಕಿನ ನಾನಾ ಕಡೆ ಭೇಟಿ ನೀಡಿ ಕುಡಿಯುವ ನೀರು ಪೂರೈಕೆ ಪರಿಶೀಲನೆ ನಡೆಸಿದರು

ಬಬಲಾದ ಗ್ರಾಮ ಪಂಚಾಯಿತಿಯ ಹಲಗುಣಕಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಟ್ಯಾಂಕರ್ ಮೂಲಕ ನೀರು ಪೆÇರೈಕೆ ಮಾಡುತ್ತಿರುವದನ್ನು ಪರಿಶೀಲನೆ ನಡೆಸಿದ ಅವರು, ವಾಟರಮ್ಯಾನಗಳು ಕಡ್ಡಾಯವಾಗಿ ಟ್ಯಾಂಕರ ಮೂಲಕ ನೀರು ಪೆÇೀರೈಕೆ ಮಾಡುತ್ತಿರುವ ಸ್ಥಳದಲ್ಲಿ ಹಾಜರಿರಬೇಕು. ನೀರು ಪೋಲಾಗದಂತೆ ವ್ಯವಸ್ಥಿತವಾಗಿ ನೀರು ಒದಗಿಸುವಂತೆ ಸೂಚನೆ ನೀಡಿದರು.

ಚವಡಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ, ಅಲ್ಲಿನ ಕೋಣೆಗಳನ್ನು ಪರಿಶೀಲನೆ ನಡೆಸಿದರು. ವಸತಿ ನಿಲಯವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯಲ್ಲಿ ಅತ್ಯಂತ ಸ್ವಚ್ಛತೆ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಮೇಲಿಂದ ಮೇಲೆ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಿದ ಅವರು, ನಂತರ ಚವಡಿಹಾಳ ಗ್ರಾಮ ಪಂಚಾಯತಿಯ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಗ್ರಂಥಾಲಯದ ಕುರಿತು ಗ್ರಾಮದಲ್ಲಿ ವ್ಯಾಪಕ ಪ್ರಚಾರ ಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳು, ಯುವಕರು & ಸಾರ್ವಜನಿಕರು ಇದರ ಉಪಯೋಗ ಪಡಿಯುವಂತೆ ಪ್ರೇರೆಪಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿದ ಎನ್.ಆರ್.ಎಲ್.ಎಮ್ ಶೆಡ್ಡ್ ವೀಕ್ಷಣೆ ಮಾಡಿದರು. ನಂತರ ತಾಂಬಾ ಗ್ರಾಮ ಪಂಚಾಯತಿಯ ಸಂಗೋಗಿ ಕೆರೆಯ ಬಹುಹಳ್ಳಿ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೆರೆಯಲ್ಲಿರುವ ಹೂಳನ್ನು ನರೇಗಾ ಯೋಜನೆಯಡಿ ನಿಯಮಾನುಸಾರ ತೆಗೆಯಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಸುನೀಲ ಮದ್ದಿನ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ.ಇಂಡಿ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಸಂಜಯ ಖಡಗೇಕರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎಸ್.ಆರ್.ರುದ್ರವಾಡಿ, ತಾಲೂಕ ಯೋಜನಾಧಿಕಾರಿಗಳಾದ ನಂದಿಪ ರಾಥೋಡ್, ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಎಸ್.ಡಿ.ಬಿರಾದಾರ, ಸಿ.ಜಿ.ಪಾರೆ, ಮಹೇಶ ದೈವಾಡಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌