ಯತ್ನಾಳರಿಂದ ಬಿಜೆಪಿಗೆ ಡ್ಯಾಮೇಜ್- ನಿರಾಣಿ: ನಾನಾರಿಗೂ ಹೆದರಲ್ಲ ನನ್ನ ರಾಜಕೀಯವೇ ಬೇರೆ- ಜಿಗಜಿಣಗಿ: ಯತ್ನಾಳ ಇಂಥ ರಾಜಕೀಯ ನಿಲ್ಲಿಸಲಿ- ನಡಹಳ್ಳಿ
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮಾಜಿ ಸಚಿವ ಮುರುಗೇಶ ನಿರಾಣಿ, ಸಂಸದ ರಮೇಶ ಜಿಗಜಿಣಗಿ ಮತ್ತು ಮಾಜಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಮುರುಗೇಶ ನಿರಾಣಿ, ಹೇಳಿಕೆ ಮತ್ತು ವರ್ತನೆಯಿಂದ ಬಿಜೆಪಿಗೆ ಡ್ಯಾಮೇಜ್ ಆಗಿದ್ದು, ಅವರ ಪಾಪದ ಕೊಡ ತುಂಬಿದೆ ಎಂದು ವಾಗ್ದಾಳಿ ನಡೆಸಿದರು. ಸಂಕೇಶ್ವರ ತ್ಯಾಗದಿಂದ ಯತ್ನಾಳ ಕೇಂದ್ರ ಸಚಿವರಾಗಿದ್ದರು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಅಂದಿನ […]
ಉತ್ತಮ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಸೇವನೆ ಅತೀ ಮುಖ್ಯ- ಡಾ. ಆರ್. ಬಿ. ಕೊಟ್ನಾಳ
ವಿಜಯಪುರ: ಇಂದಿನ ದಿನಗಳಲ್ಲಿ ಉತ್ತಮ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಸೇವನೆ ಮುಖ್ಯವಾಗಿದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಹೇಳಿದ್ದಾರೆ. ನಗರದ ಬಿ.ಎಲ್.ಡಿಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಮೂಲಭೂತ ಸೌಕರ್ಯಗಳಲ್ಲಿ ನೀರು ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಎಸ್. ಎಸ್. ಪಿಯು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಜೊತೆಗೆ ಶುದ್ಧ ನೀರು ಕುಡಿಯುವ ವ್ಯವಸ್ಥೆ […]
ಲೋಕಾಯುಕ್ತರ ದಾಳಿ- ಬೆಳ್ಳಂಬೆಳಿಗ್ಗೆ ಭ್ರಷ್ಟ್ರ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು
ವಿಜಯಪುರ: ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ನಿವಾಸಗಳ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳು ಅಕ್ರಮ ಆಸ್ತಿಪಾಸ್ತಿ ಕುರಿತು ತನಿಖೆ ಕೈಗೊಂಡಿದ್ದಾರೆ. ಬಸವನ ಬಾಗೇವಾಡಿ ಲೋಕೋಪಯೋಗಿ ಇಲಾಖೆ ಪ್ರಭಾರಿ ಎಇಇ ಭೀಮನಗೌಡ ಬಿರಾದಾರ ನಿವಾಸದ ಮೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯಪುರ ನಗರದ ಆರ್. ಟಿ. ಓ ಕಚೇರಿ ಹಿಂಬದಿಯಲ್ಲಿರುವ ಇವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು […]
ಜಿಲ್ಲೆಯಲ್ಲಿ ಮೀನು ಸಾಕಾಣಿಕೆಗೆ ಮೂಲಕ ಆರ್ಥಿಕವಾಗಿ ಸದೃಢರಾಗಲು ವಿಫುಲ ಅವಕಾಶಗಳಿವೆ- ರಾಜಕುಮಾರ ನಾಯ್ಕ
ವಿಜಯಪುರ: ವಾಣಿಜ್ಯ ಮೌಲ್ಯವುಳ್ಳ ಮೀನುಗಾಳಾದ ಸೀ ಬಾಸ್, ಸುರಗಿ, ತಿಲಾಫಿಯಾ ಮೀನುಗಳನ್ನು ಬೆಳೆಯುವುದರಿಂದ ರೈತರು ಆರ್ಥಿಕವಾಗಿ ಸದೃಡವಾಗಬಹುದು ಎಂದು ಮಂಗಳೂರು ವಿಭಾಗದ ಸಾಗರೊತ್ಪನ ಮತ್ತು ರಪ್ತು ಅಭಿವೃದ್ದಿ ಪ್ರಾದಿಕಾರದ ಉಪನಿರ್ದೇಶಕ ರಾಜಕುಮಾರ ನಾಯ್ಕ ಹೇಳಿದರು. ವಿಜಯಪುರ ನಗರದ ಹೊರವಲಯದಲ್ಲಿ ಭೂತನಾಳ ಕೆರೆ ಬಳಿ ಇರುವ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರ,ದಲ್ಲಿ ಆಯೋಜಿಸಲಾಗಿದ್ದ ಸಮಗ್ರ ಮೀನು ಸಾಕಾಣಿಕೆÉ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೀ ಬಾಸ್ ಮೀನು ಕೃಷಿಯನ್ನು ಉತ್ತೆಜಿಸಲು […]
ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಆಚರಣೆ
ವಿಜಯಪುರ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಲೋಯೋಲಾ ಅಂತರರಾಷ್ಟ್ರೀಯ ಕಾಲೇಜಿನಲ್ಲಿ ನಡೆದ ಜಾಥಾವನ್ನು ಲೋಯೋಲಾ ಸಂಸ್ಥೆಯ ಫಾ. ಟೇಲರ್ ಮತ್ತು ಮಾನಸಿಕ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಎಸ್. ಎಂ. ಗುಣಾರಿ ಜಂಟಿಯಾಗಿ ಚಾಲನೆ ನೀಡಿದರು. ನಂತರ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಎಸ್. ಎಂ. ಗುಣಾರಿ, ಎಲ್ಲ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ […]