ವಿಜಯಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಅವರು ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಉಪಸ್ಥಿತಿತರಿದ್ದ ಮಠದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಕಾಶ ಅಕ್ಕಲಕೋಟ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಠದ ನಿರ್ದೇಶಕರಾದ ವಿಜಯ ಜೋಶಿ, ರಾಕೇಶ ಕುಲಕರ್ಣಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಗೋವಿಂದರಾಜ ದೇಶಪಾಂಡೆ, ಶ್ರೀಹರಿ ಕುಲಕರ್ಣಿ, ವೆಂಕಟೇಶ ಖಾಸನೀಸ, ವಿನಾಯಕ ಕುಲಕರ್ಣಿ, ವೆಂಕಟೇಶ ಗುಡಿ, ಶ್ರೀನಿವಾಸ ಪೂಜಾರ, ಎಸ್. ಎಂ. ದೇಸಾಯಿ, ಅರವಿಂದ ಕುಲಕರ್ಣಿ, ರವಿ ಕುಲಕರ್ಣಿ ಉಪಸ್ಥಿತರಿದ್ದರು.