ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ನದಿ ಮತ್ತು ಕೆರೆಗಳಲ್ಲಿನ ಅತr ಕೆಳಗಿನ ನೀರನ್ನು ಸಂಸ್ಕರಿಸಿ ಗ್ರಾಮೀಣ ಭಾಗದ ಪ್ರದೇಶಗಳಿಗೆ ಕುಡಿಯಲು ಪೂರೈಕೆ ಮಾಡಲಾಗುತ್ತಿರುವುದರಿಂದ ಜನರು ನೀರನ್ನು ಆದಷ್ಟು ಕಾಯಿಸಿ ಆರಿಸಿ ಉಪಯೋಗಿಸಬೇಕು ಹಾಗೂ ನೀರು ಅನಗತ್ಯವಾಗಿ ಪೋಲು ಮಾಡದೇ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಗ್ರಾಮೀಣ ಭಾಗದ ಜನರಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲಮೂಲಗಳಾದ ಕೃμÁ್ಣ, ಭೀಮಾ ನದಿಯಲ್ಲಿ ಹಾಗೂ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳ ವ್ಯಾಪ್ತಿಯಡಿ ಬರುವ ಕೆರೆಗಳಲ್ಲಿ ಮಳೆಯ ಕೊರತೆಯಿಂದ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುತ್ತದೆ. ನದಿ ಮತ್ತು ಕೆರೆಗಳಲ್ಲಿನ ಅತೀ ಕೆಳಗಿನ ನೀರನ್ನು ಸಂಸ್ಕರಿಸಿ ಗ್ರಾಮೀಣ ಭಾಗದ ಪ್ರದೇಶಗಳಿಗೆ ಕುಡಿಯಲು ಪೂರೈಕೆ ಮಾಡಲಾಗುತ್ತಿದೆ. ಮುನ್ನೆಚ್ಚೆರಿಕಾ ಕ್ರಮವಾಗಿ ನೀರನ್ನು ಚೆನ್ನಾಗಿ ಕಾಯಿಸಿ ಆರಿಸಿ ಉಪಯೋಗಿಸಬೇಕು. ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ನೀರನ್ನು ಸಮರ್ಪಕವಾಗಿ ಕುಡಿಯುವುದಕ್ಕಾಗಿ ಮಾತ್ರ ಬಳಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಮನೆಗಳಲ್ಲಿ ಬಳಸುವ ನೀರಿನ ನಲ್ಲಿಗಳಿಗೆ ಟ್ಯಾಪ್ ಅಳವಡಿಸಿಕೊಂಡು ನೀರನ್ನು ಮಿತವಾಗಿ ಬಳಸಬೇಕು. ನೀರು ಬಳಕೆಯ ನಂತರ ಕಡ್ಡಾಯವಾಗಿ ಟ್ಯಾಪನ್ನು ಬಂದ್ ಮಾಡಿ ನೀರು ಪೋಲಾಗುವುದನ್ನು ತಡೆಗಟ್ಟಬೇಕು ಎಂದು ಅವರು ತಿಳಿಸಿದ್ದಾರೆ.
ಅನಧಿಕೃತವಾಗಿ ನೀರಿನ ನಳ ಪಡೆದುಕೊಂಡವರ ಮೇಲೆ ದಂಡ ವಿಧಿಸಲಾಗುವುದು. ನೀರಿನ ನಳ ಸಂಪರ್ಕ ಪಡೆದವರು ತಕ್ಷಣವೇ ಸಂಬಂಧಿಸಿದ ಗ್ರಾಮ ಪಂಚಾಯತಿಯಿಂದ ಪರವಾನಿಗೆ ಪಡೆದುಕೊಂಡು ಕೂಡಲೇ ನಳಗಳನ್ನು ಅಧಿಕೃತಗೊಳಿಸಿಕೊಳ್ಳಬೇಕು. ವಿದ್ಯುತ ಸಮಪರ್ಕವಾಗಿ ಲಭ್ಯವಾಗದ ಕಾರಣ ಸಾರ್ವಜನಿಕರಿಗೆ ನೀರು ಪೂರೈಕೆಯಲ್ಲಿ ಅಡೆತಡೆ ಉಂಟಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಈ ವಿಷಯದಲ್ಲಿ ಸ್ಥಳೀಯ ಸಂಸ್ಥೆಗಳೊಂದಿಗೆ ಸಂಪರ್ಕಿಸಿಕೊಂಡು ಸಹಕರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದ್ದು, ಅಧಿಕಾರಿಗಳ ಜೊತೆ ಸಾರ್ವಜನಿಕರು ಸಹಕಾರ ಮನೋಭಾವದಿಂದ ವರ್ತಿಸುವುದರ ಮೂಲಕ ಸಮರ್ಪಕ ಆಡಳಿತ ವ್ಯವಸ್ಥೆಗೆ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.