ಹಾಂಕಾಂಗ ಕಂಪನಿಯಿಂದ ಸಿದ್ಧ ಉಡುಪು ಕ್ಷೇತ್ರದ ಬಂಡವಾಳ ಹೂಡಿಕೆಗೆ ಉತ್ಸುಕತೆ- ಆರು ಸಾವಿರ ಉದ್ಯೋಗ ಸೃಷ್ಟಿಗೆ ಅವಕಾಶ: ಶಿವಾನಂದ ಪಾಟೀಲ

ವಿಜಯಪುರ: ಜಿಲ್ಲೆಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಹಾಂಕಾಂಗ್ ಮೂಲದ ಟಾಲ್ ಅಪಾರೆಲ್ಸ್ ಜವಳಿ ಹಾಗೂ ಸಿದ್ಧ ಉಡುಪು ಉತ್ಪಾದನಾ ಕಂಪನಿಯು 700 ರಿಂದ 800 ಕೋಟಿ ರೂ ಹೂಡಿಕೆ ಮಾಡಲು ಉತ್ಸುಕತೆ ತೋರಿರುವ ಹಿನ್ನೆಲೆಯಲ್ಲಿ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರೊಂದಿಗೆ ಬೆಂಗಳೂರಿನಲ್ಲಿ ನಿನ್ನೆ ಸಭೆ ನಡೆಸಲಾಯಿತು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೋಂಡ ಅಧಿಕಾರಿಗಳು, ಥಾಯ್ಲೆಂಟ್ ಉದ್ಯಮಿಗಳು

ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಂಪನಿ ನಿರ್ದೇಶಕರಿಗೆ ಮಾಹಿತಿ ಒದಗಿಸಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಪೆÇ್ರೀತ್ಸಾಹ ಹಾಗೂ ರಿಯಾಯಿತಿ ಕುರಿತು ವಿಸ್ತೃತವಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳಾದ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜವಳಿ ಇಲಾಖೆಯ ಆಯುಕ್ತರಾದ ಟಿ ಎಚ್ ಎಂ ಕುಮಾರ್ ಹಾಗೂ ಕೆ ಐಎಡಿಬಿ ಸಿಇಒ ಡಾ. ಮಹೇಶ್ ಇಲಾಖಾ ಅಧಿಕಾರಿಗಳು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿ ಮನವರಿಕೆ ಮಾಡಿಕೊಡಲಾಯಿತು ಎಂದು ಹೇಳಿದರು.

ಹಾಂಕಾಂಗ್ ಟಾಲ್ ಅಪಾರೆಲ್ಸ್ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರಿಗೆ ಬಂಡವಾಳ ಹೂಡಿಕೆಗೆ ಇರುವ ವಿಪುಲ ಅವಕಾಶಗಳು ಮನವರಿಕೆಯಾದ ಹಿನ್ನೆಲೆಯಲ್ಲಿ ಇಂದು (ಜು.8)ರಂದು ಅಭಿವೃದ್ಧಿಪಡಿಸಿದ ಮುಳವಾಡ ಕೈಗಾರಿಕಾ ಪ್ರದೇಶಕ್ಕೆ (ಕೆಐಎಡಿಬಿ) ತಂಡ ಭೇಟಿ ನೀಡಿ ಪರಿವೀಕ್ಷಣೆ ನಡೆಸಿತು. ಜವಳಿ ಮತ್ತು ಸಿದ್ಧ ಉಡುಪು ಘಟಕ ಸ್ಥಾಪನೆಯಿಂದ ಐದರಿಂದ ಆರು ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

ಮುಳವಾಡ ಕೈಗಾರಿಕಾ ಪ್ರದೇಶಕ್ಕೆ (ಕೆಐಎಡಿಬಿ) ತಂಡ ಭೇಟಿ ನೀಡಿದ ಸಂದರ್ಭದಲ್ಲಿ ಜವಳಿ ಇಲಾಖೆಯ ಆಯುಕ್ತರಾದ ಟಿ ಎಚ್ ಎಂ ಕುಮಾರ್, ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌