ವಿಜಯಪುರ: ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿದ್ದು, ಜಿಲ್ಲಾದ್ಯಂತ ವಿಚಾರಣಗೆಗೆ ಬಾಕಿಯಿದ್ದ 7914 ಪ್ರಕರಣಗಳ್ನು ಇತ್ಯರ್ಥ ಪಡಿಸಲಾಗಿದೆ.
ಆಸ್ತಿ ವಿಭಾಗಕ್ಕೆ ಸಂಬಂಧಿಸಿದ 141 ಪ್ರಕರಣಗಳು, 174 ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಿಸಿದ 125 ಪ್ರಕರಣಗಳು ಹಾಗೂ ರಾಜಿಯಾಗಬಹುದಾದ 71 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 7914 ಪ್ರಕರಣಗಳು ಲೋಕ್ ಅದಾಲತ್‌ನಲ್ಲಿ ಇತ್ಯರ್ಥವಾಗಿವೆ.
ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಕಕ್ಷಿದಾರರು ಹಾಗೂ ಸರಕಾರಕ್ಕೆ ಒಟ್ಟು ರೂ. 103,95,46,788 ಧನ-ಕಂದಾಯ ಪರಿಹಾರ ಒದಗಿಸಲಾಗಿದೆ. 122306 ವ್ಯಾಜ್ಯ ಪೂರ್ವ ಪ್ರಕರಣಗಳು ಜನತಾ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿವೆ.
ಜನತಾ ನ್ಯಾಯಾಲಯಕ್ಕೆ ಸಹಕರಿಸಿದ ವಕೀಲರು, ಕಕ್ಷಿದಾರರು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ ಎಸ್. ಕುಂದರ ಅವರು ಅಭಿನಂದನೆ ಸಲ್ಲಿಸಿದ್ದಾರೆ.