ಜಿಪಿಟಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸಂಗಮೇಶ ಬಬಲೇಶ್ವರ ಆಗ್ರಹ

ವಿಜಯಪುರ: ಆರನೇ ತರಗತಿಯಿಂದ ಎಂಟನೇ ತರಗತಿವರೆಗ ಪಾಠ ಮಾಡುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕೌನ್ಸಲಿಂಗ್ ನಲ್ಲಿ ವರ್ಗಾವಣೆಗೆ ಅವಕಾಶ ನೀಡದೇ ತಾರತಮ್ಮ ಮಾಡುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಬೇಸರ ವ್ಯಕ್ತಪಡಿಸಿದ್ದಾರೆ. 

ಜಿಪಿಟಿ ಶಿಕ್ಷಕರು ತಮ್ಮ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಂಗಮೇಶ ಬಬಲೇಶ್ವರ ಅವರ ನಿವಾಸಕ್ಕೆ ತೆರಳಿ ಮನವಿ ಮಾಡಿದರು.  ಈ ಸಂದರ್ಭದಲ್ಲಿ ಈ ಶಿಕ್ಷಕರ ಸಮಸ್ಯೆ ಬಗೆಹರಿಸುವಂತೆ ಡಿಡಿಪಿಐ ಎನ್. ಎಚ್. ನಾಗೂರ ಹಾಗೂ ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ ಸದಸ್ಯ ಪ್ರಕಾಶ ಹುಕ್ಕೆರಿ ಅವರಿಗೂ ದೂರವಾಣಿ ಮೂಲಕ ಮಾತನಾಡಿ ಮನವಿ ಮಾಡಿದರು.

ಬಳಿಕ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರೊಂದಿಗೆ ಚರ್ಚಿಸಿ ಶಿಕ್ಷಕರಿಗೆ ಆಗಿರುವ ತಾರತಮ್ಯ ಮತ್ತು ಅನ್ಯಾಯವನ್ನು ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌