ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ- ಸಿ. ಬಿ. ಕುಂಬಾರ

ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಗಳು ಪ್ರಮುಖ ಪಾತ್ರ ವಹಿಸುವುದರಿಂದ ಆಧುನಿಕತೆಗೆ ತಕ್ಕಂತೆ ಕಲಿಕಾ ಹಂತದಿಂದಲೇ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸಿ. ಬಿ. ಕುಂಬಾರ ಹೇಳಿದ್ದಾರೆ.

ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ. ಸಿ. ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜ್ಯ ಸರಕಾರದ ಕೌಶಲ್ಯ ಅಭಿವೃದ್ದಿ ನಿಗಮ, ಕೌಶಲ್ಯಾಭಿವೃದ್ದಿ,ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ದಿ ಸಹಯೋಗದಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕೌಶಲ್ಯ ಆಧಾರಿತ ವೃತ್ತಿ ಮಾರ್ಗದರ್ಶನ ಹಾಗೂ ಪ್ರಥಮ ಚಿಕಿತ್ಸಾ ಕೌಶಲ್ಯ ಕುರಿತು ಮಾತನಾಡಿದ ಅವರು, ಮಕ್ಕಳಿಗೆ ಕೌಶಲ್ಯವನ್ನು ವೃದ್ದಿಸುವ ನಿಟ್ಟಿನಲ್ಲಿ ಪ್ರಾರಂಭಿಸಲಾಗಿರುವ ಕೌಶಲ್ಯ ಅಭಿವೃದ್ದಿ ಇಲಾಖೆ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ವೃದ್ದಿಸುವ ತರಬೇತಿ ನೀಡುತ್ತಿದೆ ಎಂದು ತಿಳಿಸಿದರು.

ವಿಶ್ವ ಕೌಶಲ್ಯ ದಿನಾಚರಣೆಯಲ್ಲಿ ಸಿ. ಬಿ. ಕುಂಬಾರ ಮಾತನಾಡಿದರು

ನಿರುದ್ಯೋಗಿ ನಾನಾ ಹಂತದ ತರಬೇತಿಯನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಪದವಿಯ ಜೊತೆಗೆ ಕೌಶಲ್ಯವನ್ನು ವೃದ್ಧಿಸಿಕೊಂಡರೆ ನಾನಾ ಕ್ಷೇತ್ರಗಳಲ್ಲಿ ಲಭ್ಯವಿರುವ ಉದ್ಯೋಗಗಳನ್ನು ಬೇಗನೆ ಪಡೆಯಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕೌಶಲ್ಯವನ್ನು ಕಲಿಯುವುದು ಅಗತ್ಯವಾಗಿದೆ. ಕಂಪ್ಯೂಟರ್ ಕ್ಷೇತ್ರದಲ್ಲಿಯೇ ನಾನಾ ಅವಕಾಶಗಳಿವೆ. ಡಾಟಾ ಎಂಟ್ರಿ ಅಟಪರೇಟರ್, ಟೈಪಿಂಗನಂಥ ಹತ್ತು ಹಲವಾರು ರೀತಿಯ ತರಬೇತಿಗಳನ್ನು ಇಲಾಖೆ ನೀಡುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ರಾಜೇಂದ್ರಕುಮಾರ ಜಿ. ಮಾತನಾಡಿ, ಪ್ರಥಮ ಚಿಕಿತ್ಸೆ ಕೌಶಲ್ಯವು ನಮ್ಮ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅಪಘಾತದಂಥ ತುರ್ತು ಸಂದರ್ಭದಲ್ಲಿ ಜೀವರಕ್ಷಕವಾಗುತ್ತದೆ. ಹಾವು ಕಡಿತ. ಬೆಂಕಿ ಅವಘಡದಂಥ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆಯ ಕೌಶಲ್ಯವಿದ್ದರೆ ಜೀವ ರಕ್ಷಿಸಲು ನೆರವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಹಾಯಕ ಸಂಖ್ಯಾಶಾಸ್ತ್ರ ಅಧಿಕಾರಿ ಎಂ. ಎಸ್. ಬಾಗೇವಾಡಿ, ಐಕ್ಯೂಎಸಿ ನಿರ್ದೇಶಕ ಡಾ. ಪಿ. ಎಸ್. ಪಾಟೀಲ, ಕಾರ್ಯಕ್ರಮ ಸಂಯೋಜಕ ಡಾ. ಬಿ. ಆರ್. ಮಹೀಂದ್ರಕರ, ಡಾ. ಸುಜ್ಞಾನಿ ಬಿರಾದಾರ, ಪ್ರೊ. ಸಂತೋಷ ಹೊಸಬಾಸೆ, ಪ್ರೊ. ಆರ್. ಡಿ. ಜೋಷಿ, ಪ್ರೊ. ಅಶ್ವಿನಿ ಹಿರೇಮಠ, ಪ್ರೊ. ಅಮಿತ ತೇರದಾಳ, ಪ್ರೊ. ಮಾಹಾಂತೇಶ ಜೇವೂರ, ಮಹಾವಿದ್ಯಾಲಯದ ಎಲ್ಲ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೊ. ಮಾಲತಿ ಚನಗೊಂಡ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌