ವಿಜಯಪುರ: ನಗರದ ಶ್ರೀಮತಿ ಕುಮುದಬೇನ ದರಬಾರ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯುವ ಕೌಶಲ್ಯ ದಿನ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಗುರುಪಾದಯ್ಯಾ ಹೀರೆಮಠ, ಉದ್ಯೋಗ ಪಡೆಯಲು ಅಗತ್ಯವಾಗಿರುವ ಕೌಶಲ್ಯಗಳ ಮಹತ್ವವನ್ನು ವಿವರಿಸಿದರು.
ನಮ್ಮ ದೇಶದಲ್ಲಿ ಇರುವ ಸರಕಾರಿ ಉದ್ಯೋಗಗಳು ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಅವಕಾಶಗಳ ಬಗ್ಗೆ ಹಾಗೂ ಅವುಗಳಿಗೆ ಬೇಕಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಹೇಗೆ ಅಳವಡಿಸಿಕೊಳ್ಳಬೇಕು ಎಂಬುದರ ಕುರಿತು ಅ;ರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಜಿಲ್ಲಾ ಉದ್ಯೋಗ ವಿನಮಯ ಕೇಂದ್ರದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಸೋಮಶೇಖರ ಆಲಮೇಲ, ಇರ್ಫಾನ ವಾಹಿದಿ, ಕಾಲೇಜಿನ ಪ್ರಾಚಾರ್ಯ ವಿನಾಯಕ ಗ್ರಾಮಪುರೋಹಿತ ಉಪಸ್ಥಿತರಿದ್ದರು.
ವಿನೋದ ಪಾಟೀಲ ನಿರೂಪಿಸಿದರು. ದುರ್ಗಾಲಕ್ಷ್ಮೀ ಆಚಾರ್ಯ ವಂದಿಸಿದರು.