ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥರಾಗಿದ್ದ ಲೋಕಾಯುಕ್ತ ಡಿವೈಎಸ್ಪಿ ಅರುಣ ನಾಯಕ ನಿಧನ

ವಿಜಯಪುರ: ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥರಾಗಿದ್ದ ವಿಜಯಪುರ ಲೋಕಾಯುಕ್ತ ಎಸ್ಪಿ ಅರುಣ ನಾಯಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದ ಬಳಿ‌‌ ಇರುವ ಒಳಾಂಗಣ ಕ್ರೀಡಾಂಗಣದಲ್ಲಿ ಅರುಣ ನಾಯಕ ಅವರು ರಾತ್ರಿ 8.30ರ ಸುಮಾರಿಗೆ ಇತರ ಆಟಗಾರರೊಂದಿಗೆ ಆಟವಾಡುತ್ತಿದ್ದರು.  ಸುಮಾರು‌ ಆರು ಗೇಮ್ ಆಟವಾಡಿದ ಮೇಲೆ ಸುಸ್ತಾದವರಂತೆ ಕಂಡು ಬಂದ ಅವರು ಪಕ್ಕದ ಬೆಂಚ್ ಮೇಲೆ ಹೋಗಿ ಕುಳಿತರು.  ಅಷ್ಟರಲ್ಲಿ ಉಸಿರಾಟವೂ ಹೆಚ್ಚಾಗಿದ್ದ ಶಬ್ದ ಬಂದ ಹಿನ್ನೆಲೆಯಲ್ಲಿ ಅವರ ಜೊತೆ ಆಟವಾಡುತ್ತಿದ್ದ ಸಗರ ಅಬೂಬಕರ, ಅಜೀಂ, […]

ಯತ್ನಾಳ‌ ಅಸ್ವಸ್ಥ- ಸಿಎಂ, ಸ್ಪೀಕರ, ಬೊಮ್ಮಾಯಿ, ಬಿ ಎಸ್ ವೈ ಆಸ್ತತ್ರೆಗೆ ಭೇಟಿ- ಆರಾಮವಾಗಿರುವೆ ಎಂದ ಶಾಸಕ

ಬೆಂಗಳೂರು: ಅಧಿವೇಶನ‌ ಸಂದರ್ಭದಲ್ಲಿ ಉಂಟಾದ ಗದ್ದಲದಲ್ಲಿ ಅಸ್ವಸ್ಥರಾದ ವಿಜಯಪುರ ನಗರ ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ, ಸ್ಪೀಕರ್ ಯು. ಟಿ. ಖಾದರ, ಮಾಜಿ ಸಿಎಂ ಗಳಾದ ಬಿ. ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮುಖಂಡರಾದ ಸಿ. ಟಿ. ರವಿ ಸೇರಿದಂತೆ ಅನೇಕ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ ಅವರ ಆರೋಗ್ಯ ವಿಚಾರಿಸಿದ್ದಾರೆ. ಮಧ್ಯಾಹ್ನ ವಿಧಾನ ಸಭೆ ಅಧಿವೇಶನದಲ್ಲಿ ಗದ್ದಲ ಉಂಟಾಗಿತ್ತು.  […]

ಸಾಂತ್ವನ ಕೇಂದ್ರ, ವೃದ್ಧಾಶ್ರಮಕ್ಕೆ ಜಿ. ಪಂ. ಸಿಇಓ ರಾಹುಲ ಶಿಂಧೆ ಭೇಟಿ, ಪರಿಶೀಲನೆ

ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅನುದಾನದಲ್ಲಿ ವಿಜಯಪುರ ನಗರದಲ್ಲಿ ನಡೆಯುತ್ತಿರುವ ಸಾಂತ್ವನ ಕೇಂದ್ರ ಮತ್ತು ವೃದ್ಧಾಶ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಗಣೇಶ ನಗರದಲ್ಲಿ ಶ್ರೀಧರ ಸ್ವಾಮಿ ವಿದ್ಯಾವರ್ಧಕ ಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿರುವ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿ, ಸಾಂತ್ವನ ಕೇಂದ್ರದ ಮುಖ್ಯಸ್ಥ ಕೆ.ಎನ್.ಮೇಟಿ ಅವರಿಂದ ಕೇಂದ್ರದ ಕಾರ್ಯನಿರ್ವಹಣೆ ಹಾಗೂ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದ ಅವರು, ನೊಂದವರಿಗೆೆ ಸಮರ್ಪಕವಾಗಿ ಸ್ಪಂದಿಸುವುದರೊAದಿಗೆ ಅವರಲ್ಲಿ […]

ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಏಳಿಗೆ ಸಾಧ್ಯ- ಡಾ. ಆರ್. ಬಿ. ಕೊಟ್ನಾಳ

ವಿಜಯಪುರ: ಗ್ರಾಮಗಳ ಅಭಿವೃದ್ಧಿಯಿಂದ ದೇಶ ಏಳಿಗೆ ಸಾಧ್ಯ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಹೇಳಿದ್ದಾರೆ. ಕನ್ನಾಳ ಗ್ರಾಮದಲ್ಲಿ  ಬಿ. ಎಲ್. ಡಿ. ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎನ್. ಎಸ್. ಎಸ್ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ನಾವೆಲ್ಲರೂ ಶ್ರಮಿಸಬೇಕು.  ಭಾರತ ಹಳ್ಳಿಗಳಿಂದ ಕೂಡಿರುವ ದೇಶವಾಗಿದ್ದು, ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ದಿಯಾದಂತೆ.  ಇದರಿಂದ  ಮಹಾತ್ಮ […]