ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳಿಗೆ ಏಳು ದಿನಗಳ ವೈದ್ಯಕೀಯ ತಪಾಸಣೆ, ಭೌತಿಕ ಚಿಕಿತ್ಸೆ ಉಚಿತ ಕಾರ್ಯಾಗಾರ

ವಿಜಯಪುರ: ಬೆನ್ನುಹುರಿ ಅಪಘಾತಕ್ಕೆ ಒಳಗಾದ ವ್ಯಕ್ತಿಗಳಿಗೆ ಏಳು ದಿನಗಳ ವೈದ್ಯಕೀಯ ತಪಾಸಣೆ ಮತ್ತು ಭೌತಿಕ ಚಿಕಿತ್ಸೆಯ ಉಚಿತ ಕಾರ್ಯಾಗಾರ ನಗರದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆಯಿತು.

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪರ‍್ನವಸತಿ ಕೇಂದ್ರ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆರಂಭವಾದ ಈ ಶಿಬಿರವನ್ನು ಬಿ.ಎಲ್.ಡಿ.ಇ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚರ‍್ಯ ಡಾ. ಬಿ.ಎಂ.ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ಡಾ. ರಾಜೇಶ ಹೊನ್ನೂಟಗಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಭಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಿ, ಬೆನ್ನುಹುರಿ ಅಪಘಾತಕೊಳ್ಳಗಾದ ವ್ಯಕ್ತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ನಿಮೀಷ ಆಚರ‍್ಯ, ಡಿ.ಡಿ.ಆರ್.ಸಿ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

ಡಿ.ಡಿ.ಆರ್.ಸಿ ಕೇಂದ್ರದ ನೋಡಲ್ ಅಧಿಕಾರಿ ವಿಶ್ವನಾಥ ಅವಟಿ ನಿರೂಪಿಸಿ ವಂದಿಸಿದರು.

ಈ ಶಿಬಿರದಲ್ಲಿ ವಿಕಲಚೇತನರಿಗೆ ವೈದ್ಯಕೀಯ ಚಿಕಿತ್ಸೆಗಳಾದ ಎಂ.ಆರ್.ಆಯ್. ಸಿಟಿ ಸ್ಕಾನ್, ಮೈಕ್ರೋಸ್ಕೋಪ್ ಎಕ್ಸರೆ, ಭೌತಿಕ ಚಿಕಿತ್ಸೆ ಹಾಗೂ ಇತರ ವೈದ್ಯಕೀಯ ಚಿಕಿತ್ಸೆಗಳ ಜೊತೆಗೆ ಔಷಧಿ ಹಾಗೂ ಊಟದ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌