ವಿಪತ್ತಿಗೆ ತುತ್ತಾಗುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜನಜಾಗೃತಿ ಮೂಡಿಸಿ- ಡಿಸಿ ಟಿ. ಭೂಬಾಲನ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರವಾಹವನ್ನು ಸಮರ್ಥವಾಗಿ ಎದುರಿಸಲು ವಿಪತ್ತುಗಳಿಗೆ ತುತ್ತಾಗುವಂಥ ಪ್ರದೇಶಗಳನ್ನು ಗುರುತಿಸಿಕೊಂಡು ಗ್ರಾಮ ವಿಪತ್ತು ನಿರ್ವಹಣಾ ಸಮಿತಿ ಎಲ್ಲ ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜನರಲ್ಲಿ ಜಾಗೃತಿ ಮೂಡಿಸಿ ಯಾವುದೇ ಅನಾಹುತಗಳು ಸಂಭವಿಸದAತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕೇಸ್ವಾನ್ ಕೊಠಡಿಯಲ್ಲಿ ನಡೆದ ಮುಂಗಾರು ಮಳೆಯ ಮುಂಜಾಗ್ರತೆ ಕ್ರಮ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕೃಷ್ಣಾ, ಭೀಮಾ ಮತ್ತು ಡೋಣಿ ನದಿ ಪಾತ್ರದಲ್ಲಿ 54 […]