ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ -ಅಧಿಕಾರಿಗಳಿಗೆ ಸಚಿವ ಎಂ. ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ
ವಿಜಯಪುರ: ಮಹಾರಾಷ್ಟ್ರ ಮತ್ತು ನೆರೆಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದಲ್ಲಿರುವ ನೀರನ್ನು ಕಾಲುವೆಗಳ ಮೂಲಕ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದರು. ಜಿ. ಪ. ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ಆಲಮಟ್ಟಿ ಜಲಾಶಯದಲ್ಲಿ ಲೈವ್ ಸ್ಟೋರೇಜ್ ಕೇವಲ 2 ಟಿಎಂಸಿಗೆ ಇಳಿಕೆಯಾಗಿತ್ತು. […]
ಪ್ರವಾಹ ಕುರಿತು ಆತಂಕ ಪಡುವ ಅಗತ್ಯವಿಲ್ಲ- ಮುನ್ನೆಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್
ವಿಜಯಪುರ: ಜಿಲ್ಲೆಯಲ್ಲಿ ಪ್ರವಾಹ ಕುರಿತು ಸದ್ಯದ ಪರಿಸ್ಥಿತಿಯಲ್ಲಿ ಆತಂಕ ಪಡುವ ಅವಶ್ಯಕತೆಯಿಲ್ಲ ಅದಾಗ್ಯೂ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಯಾವುದೇ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದರು. ಮುಖ್ಯಮಂತ್ರಿಗಳಿಂದ ಮಳೆಹಾನಿ ಸ್ಥಿತಿಗತಿ ಕುರಿತು ವಿಡಿಯೋ ಸಂವಾದ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಸಂಜೆ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ವಿಪತ್ತು ನಿರ್ವಹಣೆಗಾಗಿ ಮುಖ್ಯಮಂತ್ರಿಗಳು ಸೂಕ್ತ ನಿರ್ದೇಶನ ನೀಡಿದ್ದು, ಮಳೆಯಿಂದ ಜೀವ, ಜಾನುವಾರು ಹಾಗೂ ಮನೆ ಹಾನಿಗಳನ್ನು ತಡೆಗಟ್ಟಲು ಎಲ್ಲ ಅಗತ್ಯ […]
ಅಪರಾಧಿಗಳು ಯಾವುದೇ ಜಾತಿ, ಧರ್ಮ, ಪಕ್ಷದವರಿದ್ದರೂ ಶಿಕ್ಷೆಯಾಗಬೇಕು- ನಿರಪರಾಧಿಗಳಿಗೆ ಅನ್ಯಾಯವಾಗಬಾರದು- ಎಂ. ಬಿ. ಪಾಟೀಲ
ವಿಜಯಪುರ: ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಗಳ ಕುರಿತು ಶಾಸಕ ತನ್ವೀರ್ ಸೇಠ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಪತ್ರ ಬರೆದಿರುವುದು ತಪ್ಪಲ್ಲ. ಅದೊಂದು ಸಹಜ ಪ್ರಕ್ರಿಯೆಯಾಗಿದೆ. ಆ ಪತ್ರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ರೊಟೀನ್ ಮ್ಯಾಟರ್. ತನ್ವಿರ್ […]
ಜಿಲ್ಲಾ ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆ ಸಹಾಯವಾಣಿ ಆರಂಭ
ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕರಿಂದ ಬರುವ ದೂರುಗಳನ್ನು ಆಲಿಸಿ ಪರಿಹಾರ ಕಲ್ಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ನೂತನವಾಗಿ ಸಹಾಯವಾಣಿ (9480831699)ಯನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹನಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಗ್ರಾಮೀಣ ಭಾಗದ ಜನರ ಗುಳೆ ತಪ್ಪಿಸುವ ಮತ್ತು ಅವರಿಗೆ ಉದ್ಯೋಗ ಖಾತರಿ ನೀಡುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕುರಿತು ಗ್ರಾಮೀಣ ಜನರಿಗೆ ಮಾಹಿತಿ […]
ಕನ್ನೂರಿಗೆ ಸಚಿವ ಎಂ. ಬಿ. ಪಾಟೀಲ ಭೇಟಿ- ಮನೆ ಕುಸಿದು ಸಾವಿಗೀಡಾದ ವೃದ್ಧೆಯ ಮಹಿಳೆಯ ಕುಟುಂಬಕ್ಕೆ ಸಾಂತ್ವನ- ರೂ. 5 ಲಕ್ಷ ಪರಿಹಾರದ ಚೆಕ್ ವಿತರಣೆ
ವಿಜಯಪುರ: ಕನ್ನೂರ ಗ್ರಾಮದಲ್ಲಿ ತೋಟದ ಮನೆ ಮೇಲ್ಛಾವಣಿ ಕುಸಿದ ಪರಿಣಾಮ ಶಿವಮ್ಮ ನೂರುಂದಪ್ಪ ಸಾವಳಗಿ(60) ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಗ್ರಾಮಕ್ಕೆ ಭೇಟಿ ನೀಡಿದರು. ಮೃತರ ಅಂತಿಮ ದರ್ಶನ ಪಡೆದ ಅವರು ಮೃತರ ಕುಟುಂಬ ಸದಸ್ಯರಿಗೆ ಸರಕಾರದ ವತಿಯಿಂದ ರೂ. 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ […]
ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು- ಮಕ್ಕಳ ಕುಟುಂಬಸ್ಥರಿಗೆ ಸಚಿವ ಎಂ. ಬಿ. ಪಾಟೀಲರಿಂದ ಸಾಂತ್ವನ, ವೈಯಕ್ತಿಕ ರೂ. 1 ಲಕ್ಷ ಧನಸಹಾಯ
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಅಡವಿ ಸಂಗಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ತಿಕೋಟಾ ತಾಲೂಕಿನ ಅತಾಲಟ್ಟಿ ಗ್ರಾಮದ ಸುಭಾಷ ಬಿಳೂರ(12) ಮತ್ತು ಸಂತೋಷ ಪಾಶು ಬಿಳೂರ (9) ಬಾಲಕರ ಮನೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಕಳೆದ ರವಿವಾರ ಬಾಲಕರು ಆಟವಾಡುವಾಗ ಕೃಷಿ ಹೊಂಡದಲ್ಲಿ ಇಬ್ಬರೂ ಸಾವನ್ನಪ್ಪಿದ್ದರು. ಮಂಗಳವಾರ ಸಚಿವರು […]