ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕರಿಂದ ಬರುವ ದೂರುಗಳನ್ನು ಆಲಿಸಿ ಪರಿಹಾರ ಕಲ್ಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ನೂತನವಾಗಿ ಸಹಾಯವಾಣಿ (9480831699)ಯನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹನಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.
ಗ್ರಾಮೀಣ ಭಾಗದ ಜನರ ಗುಳೆ ತಪ್ಪಿಸುವ ಮತ್ತು ಅವರಿಗೆ ಉದ್ಯೋಗ ಖಾತರಿ ನೀಡುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕುರಿತು ಗ್ರಾಮೀಣ ಜನರಿಗೆ ಮಾಹಿತಿ ಒದಗಿಸಲು ಮತ್ತು ನೇರವಾಗಿ ನರೇಗಾ ಕೂಲಿಕಾರರು ಅಧಿಕಾರಿಗಳೊಂದಿಗೆ ಮಾತನಾಡಲು ಹೊಸದಾಗಿ ನರೇಗಾ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಜಿಲ್ಲೆಯ ಎಲ್ಲ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ & ಪಂ.ರಾ) ಹಾಗೂ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹೊಸದಾಗಿ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿ.ಎಸ್.ಎನ್.ಎಲ್) ಸಿಯುಜಿ ಸಿಮ್ ಗಳನ್ನು ನೀಡಲಾಗಿದ್ದು, ಅಧಿಕಾರಿಗಳು ಸದರಿ ಸಿಮ್ ನ್ನು ತಮ್ಮ ಅಧೀನದಲ್ಲಿ ಇಟ್ಟುಕೊಳ್ಳುವದರ ಜೊತೆಗೆ 24*7 ಚಾಲ್ತಿಯಲ್ಲಿಟ್ಟು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವAತೆ ಈಗಾಗಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿ ಮನೆಗೆ ಇದನ್ನು ತಲುಪಿಸುವ ಮೂಲಕ ಯೋಜನೆಯ ಕುರಿತು ಪ್ರತಿ ಗ್ರಾಮದ ಪ್ರತಿ ವ್ಯಕ್ತಿಗೂ ಅರಿವು ಮೂಡಿಸುವುದು ಉದ್ದೇಶ ಹೊಂದಲಾಗಿದ್ದು, ನರೇಗಾ ಯೋಜನೆಯ ಮಾಹಿತಿಗಾಗಿ, ನರೇಗಾ ಕೆಲಸದ ಬೇಡಿಕೆ, ಕಾಮಗಾರಿಗಳ ಮಾಹಿತಿ ಅಲ್ಲದೇ ನರೇಗಾ ಯೋಜನೆಗೆ ಸಂಬAಧಿಸಿದ ದೂರುಗಳ ಬಗ್ಗೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಈ ಸಹಾಯವಾಣಿ ಅನುಕೂಲಕರವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯ ನಿರ್ವಾಹಕ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳು
ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ಆಲಮೇಲ : 9480831701, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ಬಬಲೇಶ್ವರ : 9480831702, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ಬಸವನ ಬಾಗೇವಾಡಿ : 9480831703, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ಚಡಚಣ : 9480831704, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ದೇವರ ಹಿಪ್ಪರಗಿ : 9480831705, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ಇಂಡಿ : 9480831706, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ಕೊಲ್ಹಾರ : 9480831707, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ಮುದ್ದೇಬಿಹಾಳ : 9480831708, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ನಿಡಗುಂದಿ : 9480831709, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ಸಿಂದಗಿ : 9480831710, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ತಾಳಿಕೋಟೆ : 9480831711, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ತಿಕೋಟಾ : 9480831712,ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ, ವಿಜಯಪುರ : 9480831713, ಗ್ರಾಮೀಣ ಭಾಗದ ಜನರು ತಮ್ಮ ಕುಂದು ಕೊರತೆಗಳ ನಿವಾರಣೆಗಾಗಿ ಆಯಾ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನರೇಗಾ ಯೋಜನೆಯ ಮಾಹಿತಿಗಾಗಿ ನೇರವಾಗಿ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಅಲ್ಲದೇ, ಸಂದೇಶವನ್ನು ರವಾನಿಸಬಹುದು ಇಲ್ಲವೇ ವಾಟ್ಸಪ್ ಮೂಲಕ ಸಹ ನರೇಗಾ ಕುರಿತಾದ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಈ ಸಹಾಯವಾಣಿಯ ಮೂಲಕ ಗ್ರಾಮೀಣ ಜನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಇದನ್ನು ಪ್ರಾರಂಭಿಸಲಾಗಿದ್ದು, ಜಿಲ್ಲೆಯ ಸಾರ್ವಜನಿಕರು ದಿನದ 24 ಗಂಟೆಗಳಲ್ಲಿ ಯಾವಾಗ ಬೇಕಾದರೂ ಕರೆ, ಸಂದೇಶ ಮತ್ತು ವಾಟ್ಸಪ್ನ ಮೂಲಕ ಫೋಟೋ, ವಿಡಿಯೋ ಸಹಿತ ಮಾಹಿತಿಗಳನ್ನು ಹಂಚಿಕೊಳ್ಳಬಹುದು. ವಿಜಯಪುರ ಜಿಲ್ಲೆಯ ಎಲ್ಲ ಗ್ರಾಮೀಣ ಭಾಗದ ಜನರು ಈ ಸಹಾಯವಾಣಿಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.