ವಿಜಯಪುರ ವಿಮಾನ ನಿಲ್ದಾಣ: ಫೆಬ್ರವರಿ ವೇಳೆಗೆ ಪೂರ್ಣಗೊಳಿಸುವ ಗುರಿಯಿದೆ- ಎಂ. ಬಿ. ಪಾಟೀಲ
ವಿಜಯಪಯರ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯನ್ನು ಮುಂದಿನ ವರ್ಷ ಫೆಬ್ರವರಿಯೊಳಗೆ ಪೂರ್ಣಗೊಳಿದುವ ಗುರಿಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಜಿಲ್ಲೆ ಹಲವಾರು ಐತಿಹಾಸಿಕ ಸ್ಮಾರಕಗಳನ್ನು ಹೊಂದಿದ್ದು, ಪ್ರವಾಸಿ ತಾಣವೂ ಆಗಿದೆ. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳಿಗೂ ಹೆಸರುವಾಸಿಯಾಗಿದೆ. ಶೈಕ್ಷಣಿಕವಾಗಿ ಮತ್ತು […]
ತೊರವಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ- ಸಚಿವ ಎಂ. ಬಿ. ಪಾಟೀಲ ಚಾಲನೆ
ವಿಜಯಪುರ: ಡಾ. ಫ. ಗು. ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಡಾ. ಬಿ. ಎಂ. ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಅವರ ಪುಣ್ಯಸ್ಮರಣೆ ಅಂಗವಾಗಿ ತಿಕೋಟಾ ತಾಲೂಕಿನ ತೊರವಿಯಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ತೊರವಿ ಗ್ರಾಮದ ಶ್ರೀ ಲಕ್ಷ್ಮಿ ದೇವಸ್ಥಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಚಿವರು ಶಿಬಿರಕ್ಕೆ ಚಾಲನೆ ನೀಡಿ […]
ಮಳೆ ಹಿನ್ನೆಲೆ- ಇಂದು ವಿಜಯಪುರ ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ- ಟಿ. ಭೂಬಾಲನ್
ವಿಜಯಪುರ: ಜಿಲ್ಲಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ಶುಕ್ರವಾರ ಜುಲೈ-28 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲ ಪದವಿ, ಸ್ನಾತಕೋತ್ತರ ಪದವಿ,ಡಿಪ್ಲೋಮಾ, ಇಂಜಿನೀಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೊಷಿಸಿರುವುದಿಲ್ಲ. ಎಂದಿನಂತೆ ತರಗತಿ ನಡೆಯಲಿವೆ ಎಂದು ಅವರು […]