ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ ವ್ಯಸನ ಮುಕ್ತ ದಿನಾಚರಣೆ

ವಿಜಯಪುರ: ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ವ್ಯಸನ ಮುಕ್ತ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಎಲ್ಲ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಮುಂತಾದವರು  ಉಪಸ್ಥಿತರಿದ್ದರು.

ಅನುಭಾವ ಸಾಹಿತ್ಯಕ್ಕೆ ಹೊಸ ಆಯಾಮ ಒದಗಿಸಿದವರು ಮಧುರಚೆನ್ನರು- ಡಾ. ವಿ. ಡಿ. ಐಹೊಳ್ಳಿ

ವಿಜಯಪುರ: ಮಧುರಚೆನ್ನರು ಜಾನಪದ ಸಾಹಿತ್ಯ ಸಂಶೋಧನೆ ಸಂಗ್ರಹದ ಮೂಲಕ ಈ ನೆಲದ ಮೂಲ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸಿದರು.  ಅಲ್ಲದೇ, ಅನುಭಾವ ಸಾಹಿತ್ಯಕ್ಕೆ ಹೊಸ ಆಯಾಮವನ್ನು ಒದಗಿಸಿ ಶ್ರೀ  ಮಾತಾ ಅರವಿಂದರ ತತ್ವ ಸಿದ್ದಾಂತಗಳನ್ನು ಅನುಸರಿಸಿ ಅರವಿಂದ ಮಂಡಲವನ್ನು ಸ್ಥಾಪಿಸಿ ಹಲಸಂಗಿ ಎನ್ನುವ ಕುಗ್ರಾಮವನ್ನು ಸಾಹಿತ್ಯ ಮತ್ತು ಸಂಸ್ಕೃತಿಯ ಕೇಂದ್ರವಾಗಿಸಿದ ಮಹಾನ್ ಚೇತನ ಎಂದು ಡಾ. ವಿ. ಡಿ. ಐಹೊಳ್ಳಿ ಹೇಳಿದ್ದಾರೆ.   ನಗರದ ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲಸಂಗಿ ಗೆಳೆಯರ ಪ್ರತಿಷ್ಠಾನ ವತಿಯಿಂದ ಮಧುರಚೆನ್ನರು 120ನೇ […]

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ತಾಯಿಯ ಹಾಲು ಅಮೃತಕ್ಕೆ ಸಮಾನ- ಡಾ. ಎಸ್. ಎಲ್. ಲಕ್ಕಣ್ಣವರ

ವಿಜಯಪುರ: ತಾಯಿಯ ಹಾಲು ಅಮೃತಕ್ಕೆ ಸಮಾನ, ಎಲ್ಲಾ ತಾಯಿಂದಿರು ಮಗುವಿಗೆ ಎದೆ ಹಾಲು ನೀಡುವುದನ್ನು ನಿರ್ಲಕ್ಷಿಸಬಾರದು. ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್. ಎಲ್. ಲಕ್ಕಣ್ಣವರ ಕರೆ ನೀಡಿದ್ದಾರೆ. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ ಹಾಗೂ ಜೆ.ಎಸ್.ಎಸ್ ಆಸ್ಪತ್ರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.1 ರಿಂದ 7ರ […]

ಸ್ವಸ್ಥ ಬದುಕಿಗಾಗಿ ದುಶ್ಚಟಗಳಿಂದ ದೂರವಿರಲು ಯುಜನಾಂಗಕ್ಕೆ ಕರೆ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ

ವಿಜಯಪುರ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣವು ನಮ್ಮ ಗುರಿಯಾಗಿದೆ. ಮಾದಕ ವಸ್ತು ಸೇವನೆ ಆರೋಗ್ಯಕ್ಕೆ ಹಾನಿದಾಯಕವಾಗಿದೆ. ಮಾದಕವೆಂಬ ವಿಷ ಮನುಕುಲದಲ್ಲಿ ಯುವ ಸಮುದಾಯ ನಲುಗುತ್ತಿದೆ. ವ್ಯಸನಕ್ಕೆ ಒಳಗಾಗಿ ಸುಂದರ ಬದುಕನ್ನು ವ್ಯರ್ಥಮಾಡಿಕೊಳ್ಳದೇ ಸ್ವಾಸ್ಥ ಸುಂದರ ಬದುಕು ರೂಪಿಸುವತ್ತ ಯುವಜನಾಂಗ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ.   ನಗರದ ಜಿ. ಪಂ. ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ […]