ವಿಜಯಪುರ: ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ವ್ಯಸನ ಮುಕ್ತ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಎಲ್ಲ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಮುಂತಾದವರು ಉಪಸ್ಥಿತರಿದ್ದರು.