ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ತಾಯಿಯ ಹಾಲು ಅಮೃತಕ್ಕೆ ಸಮಾನ- ಡಾ. ಎಸ್. ಎಲ್. ಲಕ್ಕಣ್ಣವರ

ವಿಜಯಪುರ: ತಾಯಿಯ ಹಾಲು ಅಮೃತಕ್ಕೆ ಸಮಾನ, ಎಲ್ಲಾ ತಾಯಿಂದಿರು ಮಗುವಿಗೆ ಎದೆ ಹಾಲು ನೀಡುವುದನ್ನು ನಿರ್ಲಕ್ಷಿಸಬಾರದು. ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್. ಎಲ್. ಲಕ್ಕಣ್ಣವರ ಕರೆ ನೀಡಿದ್ದಾರೆ.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ ಹಾಗೂ ಜೆ.ಎಸ್.ಎಸ್ ಆಸ್ಪತ್ರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.1 ರಿಂದ 7ರ ವರೆಗೆ ಆಯೋಜಿಸಲಾದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಯಿಯು ಮಗುವಿಗೆ ಹಾಲುಣಿಸುವುದರಿಂದ ಮಗುವಿನ ಆರೋಗ್ಯದಲ್ಲಿ ಆಗುವ ಧನಾತ್ಮಕ ಪರಿಣಾಮಗಳು, ಮಗುವಿನ ಬುದ್ದಿಶಕ್ತಿಯನ್ನು ಹೆಚ್ಚಿಸುತ್ತದೆ. ತಾಯಿಯ ಹೆರಿಗೆಯ ಅಂತರವನ್ನು ಹೊಂದುವುದುರಿಂದ ಸ್ತನ, ಅಂಡಾಶಯದ ಕ್ಯಾನ್ಸರ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಮಗುವಿಗೆ ಹಾಲುಣಿಸುವಿಕೆಯಿಂದ ಸಾಂಕ್ರಾಮಿಕ ಕಾಯಿಲೆಗಳು, ಅತೀಸಾರ, ಉಸಿರಾಟದ ಸೋಂಕುಗಳನ್ನು ದೂರವಿಡಬಹುದು ಎಂದು ಅವರು ಹೇಳಿದರು.

ವಿಜಯಪುರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಿಸಲಾಯಿತು

ಆರ್.ಎಂ.ಓ ಡಾ. ಸುರೇಶ ಚವ್ಹಾಣ ಮಾತನಾಡಿ, ತಾಯಿ ಹಾಗೂ ತಾಯಿ ಎದೆ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ. ತಾಯಿಯ ಎದೆ ಹಾಲಿಗೆ ಪ್ರಪಂಚದಲ್ಲಿ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಾಯಿಯು ತನ್ನ ಮಗುವಿಗೆ ಎದೆ ಹಾಲುಣಿಸುವ ಮೂಲಕ ದೇಶದ ಆರೋಗ್ಯವಂತ ಪ್ರಜೆಯನ್ನಾಗಿ ರೂಪಿಸಬೇಕು. ಹುಟ್ಟಿದ ಮಗುವಿಗೆ ಆರು ತಿಂಗಳ ತನಕ ತಾಯಿಯ ಹಾಲೊಂದನ್ನೇ ಕೊಡಬೇಕು. ಮಗು ಬೇರೆ ಪದಾರ್ಥಗಳನ್ನು ತಿನ್ನುವ ಮಗುವಿಗಿಂತ ಕಡಿಮೆ ಕಾಯಿಲೆಗೊಳಿಗಾಗುತ್ತದೆ ಮತ್ತು ಹೆಚ್ಚು ಆರೋಗ್ಯಕರವಾಗಿರುತ್ತದೆ.  ತಾಯಿಯ ಹಾಲು ಪ್ರತಿ ಶತ 25%ರಷ್ಟು ಶಿಶು ಮರಣವನ್ನು ಕಡಿಮೆ ಮಾಡಬಹುದು. ಸಾರ್ವಜನಿಕರಿಗೆ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿವಹಿಸಲು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ತನ್ಯಪಾನದ ಮಹತ್ವವನ್ನು ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಜೆ.ಎಸ್.ಎಸ್. ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞ ಡಾ.ಬಲವಂತರಾಯ ಮಸಳಿ ಮಾತನಾಡಿ, ಮಗುವಿನ ಸೂಕ್ತ ಆಹಾರ ಪದ್ದತಿಗಳು ಸ್ತನ್ಯಪಾನದಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಾಗಿರುತ್ತದೆ. ಡಬ್ಲೂಎಚ್‍ಓ ಮತ್ತು ಯುನಿಸೆಫ್ ಸೂಚನೆಯ ಪ್ರಕಾರ ಮಗು ಹುಟ್ಟಿದ ಒಂದು ಗಂಟೆಯೊಳಗೆ ಸ್ತನ್ಯಪಾನ ಆರಂಭ ಮಾಡುವುದು ಅತೀ ಅವಶ್ಯಕತೆವಿದೆ ಎಂದು ಹೇಳಿದರು.

ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ ಡಾ|| ಕೆ.ಡಿ.ಗುಂಡಬಾವಡಿ ಜೆ.ಎಸ್.ಎಸ್ ಆಸ್ಪತ್ರೆ ಸ್ತ್ರೀರೋಗ ತಜ್ಞೆ ಡಾ. ಭಾಗ್ಯಶ್ರೀ ಪೂಜಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ. ಗುಂಡಪ್ಪಾ, ಎಸ್. ಆರ್. ಬಿಸನಾಳ, ಡಾ. ರವೀಂದ್ರ ತೋಟದ, ಶರಣ ಮಳಖೇಡಕರ, ಗೌರಿ ಶಂಕರ, ಆರ್ ವ್ಹಿ ಹೊನವಾಡ, ಕುಮಾರ ರಾಠೋಡ ಐಇಸಿ ವಿಭಾಗ(ಡಿಇಓ) ಜಿಲ್ಲಾಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ. ಎಂ. ಕೊಲೂರ ಸ್ವಾಗತಿಸಿ, ನಿರೂಪಿಸಿದರು.  ಮಂಜುನಾಥ ಜುಮನಾಳ ವಂದಿಸಿದರು.

Leave a Reply

ಹೊಸ ಪೋಸ್ಟ್‌