ಶಾಲೆಯ ಪ್ರಭಾರಿ ಮುಖ್ಯ ಗುರುಗಳ ಮೇಲೆ ಹಲ್ಲೆ ಆರೋಪಿಗೆ 3 ವರ್ಷ ಜೈಲು ಶಿಕ್ಷೆ, ರೂ. 31 ಸಾವಿರ ದಂಡ ವಿಧಿಸಿದ ನ್ಯಾಯಾಲಯ- ಎಸ್. ಎಚ್. ಹಕೀಂ

ವಿಜಯಪುರ: ಶಾಲೆಯ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಆರೋಪಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು ರೂ. 31000 ದಂಡ ವಿಧಿಸಿ ಆದೇಶ ಹೊರಡಿಸಿದೆ ಎಂದು ಪ್ರಧಾನ ಸರಕಾರಿ ಅಭಿಯೋಜಕ ಎಸ್. ಎಚ್. ಹಕೀಂ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹುಸೇನ ಮೀರಾಸಾಬ ಮಣೂರ ಎಂಬುವರ […]

ಬೆಲೆಏರಿಕೆಯಿಂದ ತತ್ತರಿಸಿರುವ ಜನರಿಗೆ ಸರಕಾರ ಗ್ಯಾರಂಟಿ ಸ್ಕೀಂ ಗಳ ಮೂಲಕ ಶಕ್ತಿ ತುಂಬುತ್ತಿದೆ- ಎಂ. ಬಿ. ಪಾಟೀಲ

ವಿಜಯಪುರ: ಬೆಲೆ ಏರಿಕೆಯಿಂದ ತತ್ತರಿಸಿರುವ ನಾಡಿನ ಜನರಿಗೆ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಶಕ್ತಿ ತುಂಬುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಗೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ನಗರದಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿಗಳ ಕುರಿತು ಭರಸವೆ ನೀಡಿದ್ದೇವು. ಅದಕ್ಕೆ ಸ್ಪಂದಿಸಿ ಅಧಿಕಾರ ನೀಡಿದ ಜನರಿಗಾಗಿ ಈ ಯೋಜನೆಗಳನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ. […]

ಸಿಕ್ಯಾಬ್ ಎ.ಆರ್.ಎಸ್. ಇನಾಮದಾರ ಮಹಿಳಾ ಕಾಲೇಜಿನಲ್ಲಿ ಪ್ರೇಮಚಂದ ಜಯಂತಿ ಆಚರಣೆ

ವಿಜಯಪುರ: ನಗರದ ಸಿಕ್ಯಾಬ್ ಎ. ಆರ್. ಎಸ್. ಇನಾಮದಾರ ಮಹಿಳಾ ಮಹಾವಿದ್ಯಾಲಯದ ಉರ್ದು ಮತ್ತು ಹಿಂದಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಪ್ರೇಮಚಂದ ಜಯಂತಿ ಆಚರಿಸಲಾಯಿತು. ಈ ಸಮಾರಂಭದಲ್ಲಿ ಪಾಲ್ಗೋಂಡ ಮಹಾರಾಷ್ಟ್ರದ ಉದಯಗಿರಿ ಮಹಾವಿದ್ಯಾಲಯದ ಪ್ರೊ. ಹಾಮೀದ್ ಅಶ್ರಫ್ ಮಾತನಾಡಿ, ಪ್ರೇಮಚಂದ ಒಬ್ಬ ಮಹಾನ್ ಕಾದಂಬರಿಕಾರ ಮತ್ತು ಬರಹಗಾರರಾಗಿದ್ದರು.  ಲೌಕಿಕ ಸಂಪತ್ತಿನ ಹಿಂದೆ ಹೋಗದೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.  ಅವರು ಮಾನವೀತೆಯ ಪ್ರತಿಪಾದಕರಾಗಿದ್ದು, ಮಾನವೀಯ ಗುಣಗಳು ಮತ್ತು ಮೌಲ್ಯಗಳನ್ನು ಪ್ರತಿಪಾದಿಸಿದ್ದರು.  ಪರಸ್ಪರ ಪ್ರೀತಿ, ಪ್ರೇಮಗಳು, ಸೌಹಾರ್ದತೆ ಅವರ ಕೃತಿಗಳ ಸಂದೇಶವಾಗಿದೆ.  […]

ಪ್ರಕೃತಿ ಎರಡನೇ ತಾಯಿ ಇದ್ದಂತೆ- ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ- ಡಾ. ಆರ್. ಎಂ. ಮಿರ್ದೆ

ವಿಜಯಪುರ: ಪ್ರಕೃತಿ ಎರಡನೇ ತಾಯಿ ಇದ್ದಂತೆ.  ಸುಂದರವಾದ ಪರಿಸರವನ್ನು ಕಾಳಜಿ ವಹಿಸಿ ಸಂರಕ್ಷಿಸುವುದು ನಮ್ಮೆಲ್ಲಹ ಹೊಣೆಯಾಗಿದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಬಿ. ಆರ್ಟ್ಸ್ ಮತ್ತು ಕೆಸಿಪಿ ಸಾಯಿನ್ಸ್ ಕಾಲೇಜಿನ ಪ್ರಾಚಾರ್ಯೆ ಡಾ. ಆರ್. ಎಂ. ಮಿರ್ದೇ ಹೇಳಿದ್ದಾರೆ. ಕಾಲೇಜಿನಲ್ಲಿ ಎಸ್. ಬಿ. ಆರ್ಟ್ಸ್ ಮತ್ತು ಕೆಸಿಪಿ ಸಾಯಿನ್ಸ್, ಐಕ್ಯೂಎಸಿ, ಇಕೋ ಕ್ಲಬ್ ಹಾಗೂ ಸಸ್ಯಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಸಸ್ಯಶಾಸ್ತ್ರ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು […]