ವಿಜಯಪುರ: ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ವಿಜಯಪುರ ಜಿಲ್ಲೆಗೆ ಸಂಬಂಧಿಸಿದ 13 ಸಹಾಯಕ ಸರಕಾರಿ ಅಭಿಯೋಜಕರು ಮತ್ತು ಸಹಾಯಕ ಸರಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 37 ವರ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 40 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 42 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30 ಸಾವಿರ ಸಂಚಿತ ಸಂಭಾವನೆ ಹಾಗೂ ರೂ. 5 ಸಾವಿರ ಕಾರ್ಯನಿರ್ವಹಿಸುವ ಸೇವೆಗೆ ಪೂರಕವಾಗಿ ಅಗತ್ಯವಿರುವ ಸಿಬ್ಬಂದಿ ವೆಚ್ಚವೆಂದು ಒಟ್ಟು ರೂ. 35 ಸಾವಿರ ನೀಡಲಾಗುವುದು.
ವಕೀಲ ವೃತ್ತಿಯಲ್ಲಿ ಕನಿಷ್ಠ 3ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸರಕಾರಿ ಅಭಿಯೋಜಕರ ಕಚೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ವಿಜಯಪುರ ಕಚೇರಿಗೆ ದಿ. 20.08.2023ರ ಒಳಗಾಗಿ ಸಲ್ಲಿಸಬೇಕು ಎಂದು ಪ್ರಧಾನ ಸರಕಾರಿ ಅಭಿಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.