2 ತಿಂಗಳಲ್ಲಿ 67 ಪ್ರಕರಣಗಳಲ್ಲಿ ಭ್ರಷ್ಟರ ವಿರುದ್ಧ ಕ್ರಮ- 5 ವರ್ಷಗಳಿಂದ ಧೂಳು ಹಿಡಿದಿದ್ದ ಪ್ರಕರಣಗಳಲ್ಲಿ ಕ್ರಮ- ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮುಕ್ತ ಶುದ್ಧ ಆಡಳಿತ ನೀಡಲು ಕಾಂಗ್ರೆಸ್ ಸರಕಾರ ಬದ್ಧವಾಗಿದೆ. ಅಧಿಕಾರಕ್ಕೆ ಬಂದ ಎರಡೇ ತಿಂಗಳಿನಲ್ಲಿ ಕಳೆದ ಐದು ವರ್ಷಗಳಿಂದ ಧೂಳು ಹಿಡಿದಿದ್ದ 67 ಭ್ರಷ್ಟ ಕಂದಾಯ ಇಲಾಖೆ ಅಧಿಕಾರಿ ಮತ್ತು ನೌಕರರ ಕಡತಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗಿದ್ದು, ಆರೋಪಿಗಳಿಗೆ ಶಿಕ್ಷೆಯನ್ನೂ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇಷ್ಟು ಮಾತ್ರದ ಕ್ರಮದಿಂದ ದೊಡ್ಡ ಇಲಾಖೆಯೊಂದರಲ್ಲಿ ಸುಧಾರಣೆ ಸಾಧಿಸಿಬಿಡಬಹುದು, ಇಲಾಖೆಯನ್ನು ಭ್ರಷ್ಟಾಚಾರದಿಂದ […]
ಬವಸ ನಾಡಿನಲ್ಲಿ ಇನ್ನು ಮುಂದೆ ಮೀಟ್ ಯುವರ್ ಮಿನಿಸ್ಟರ್ ಕ್ರಾರ್ಯಕ್ರಮ
ವಿಜಯಪುರ: ಜಿಲ್ಲೆಯ ಜನತೆಯ ಅಹವಾಲು ಆಲಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದಾರೆ. ಜಲನಾಯಕ ಎಂ. ಬಿ. ಪಾಟೀಲ ಅವರು ಸಾರ್ವಜನಿಕರ ಸಮಸ್ಯೆ ಆಲಿಸಲು ಈಗ ಹೊಸದೊಂದು ಯೋಜನೆ ರೂಪಿಸಿದ್ದು, ಅದರಂತೆ ಈಗ ಜಿಲ್ಲೆಯ ಜನತೆಗಾಗಿ ಪ್ರತಿ ತಿಂಗಳು ಜಿಲ್ಲಾ ಮಟ್ಟದ ನಿಮ್ಮ ಮಂತ್ರಿ ಭೇಟಿ ಮಾಡಿ(ಮೀಟ್ ಯುವರ್ ಮಿನಿಸ್ಟರ್) ಕಾರ್ಯಕ್ರಮ ನಡೆಸಲಿದ್ದಾರೆ. ವಿಜಯಪುರ ಜಿಲ್ಲೆಯ ಜನತೆಗಾಗಿ ವಿಶೇಷ ಜಿಲ್ಲಾ […]
ಚಡಚಣ, ಇಂಡಿ ತಾಲೂಕಿಗೆ ಡಿಸಿ ಟಿ. ಭೂಬಾಲನ ಭೇಟಿ- ನಾನಾ ಕಾಮಗಾರಿಗಳ ಪರಿಶೀಲನೆ
ವಿಜಯಪುರ: ಚಡಚಣ ಮತ್ತು ಇಂಡಿ ತಾಲೂಕಿಗೆ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ, ನಾನಾ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಚಡಚಣ ತಾಲೂಕಿನ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ, ಪಟ್ಟಣಕ್ಕೆ ಕುಡಿಯುವ ನೀರು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಒದಗಿಸಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಕುಂದುಕೊರತೆಯ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಿ ಕ್ರಮ ವಹಿಸಬೇಕು. ಸ್ವೀಕರಿಸುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು. ಯಾವುದೇ ದೂರುಗಳಿಗೆ ಆಸ್ಪದಕ್ಕೆ ಎಡೆ ಮಾಡದೇ ಕಾರ್ಯ ನಿರ್ವಹಿಸಬೇಕು ಎಂದು […]
ಗುಮ್ಮಟ ನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ವಿಜಯಪುರ: ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕುಚಬಾಳ ಮಾತನಾಡಿ, ಕಾಂಗ್ರೆಸ್ ಸರಕಾರ ರೈತ ವಿರೋಧಿಯಾಗಿದೆ. ಕೇವಲ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಯಾಮಾರಿಸಿ […]
ವಿಜಯಪುರ ತಾಲೂಕಿನ ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ, ನಾನಾ ಕಾಮಗಾರಿಗಳನ್ನು ಪರಿಶೀಲಿಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಅವರು ವಿಜಯಪುರ ತಾಲೂಕಿನ ಕನ್ನೂರ ಮತ್ತು ಮಖನಾಪುರ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕನ್ನೂರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಅಮೃತ ಸರೋವರ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು. ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ದಿನ 300ಕ್ಕೂ ಹೆಚ್ಚಿನ ಜನರಿಗೆ ಈ ಕಾಮಗಾರಿಯಲ್ಲಿ ಉದ್ಯೋಗ ಕಲ್ಪಿಸಿಕೊಡಬೇಕು. ನಿತ್ಯವೂ ಗ್ರಾಮದಲ್ಲಿ ಸ್ವಚ್ಛತಾ ವಾಹನ ಸಂಚರಿಸುವುದರ ಖಾತ್ರಿಪಡಿಸಿಕೊಂಡು ಮೆಚ್ಚುಗೆ […]