ಬಬಲೇಶ್ವರ, ತಿಕೋಟಾ ಪಟ್ಟಣಗಳಿಗೆ 24×7 ನೀರು ಪೂರೈಸುವ ಗುರಿಯಿದೆ- ಕುಡಿಯುವ ನೀರು ಯೋಜನೆ ಪರಿಷ್ಕರಿಸಲು ತೀರ್ಮಾನ- ಎಂ ಬಿ ಪಾಟೀಲ

ಬೆಂಗಳೂರು: ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ಪಟ್ಟಣಗಳ ಜನರಿಗೆ 24×7 ನೀರು ಪೂರೈಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಜಯಪುರ ನಗರ, ಬಬಲೇಶ್ವರ ಮತ್ತು ತಿಕೋಟಾ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಾನಾ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿ ಮಾತನಾಡಿದರು. ಬಬಲೇಶ್ವರ ಮತ್ತು ತಿಕೋಟಾಗಳಿಗೆ […]

ದೇವರ ಹಿಪ್ಪರಗಿ ತಾಲೂಕು ಕಚೇರಿಗಳಿಗೆ ಡಿಸಿ ಭೇಟಿ, ಪರಿಶೀಲನೆ- ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಸೂಚನೆ

ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ನಾನಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರ ಹಿಪ್ಪರಗಿ ತಾಲೂಕಾ ಕಚೇರಿ, ಪಟ್ಟಣ ಪಂಚಾಯಿತಿ ಕಚೇರಿ, ರೈತ ಸಂಪರ್ಕ ಕೇಂದ್ರ, ಪಟ್ಟಣ ಪಂಚಾಯಿತಿ ಹೊಸ ಕಟ್ಟಡ, ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಮಿನಿ ವಿಧಾನಸೌಧದ ಸ್ಥಳ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚಾಲ್ತಿಯಲ್ಲಿರುವ ತಾಲೂಕಿನ ನಾನಾ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.  ಪಟ್ಟಣ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ […]

ದೇಶಕ್ಕೆ ಸ್ವಾತಂತ್ರ್ಯ ದೊರೆಯಲು ಕ್ವಿಟ್ ಇಂಡಿಯಾ ಚಳವಳಿ ಪ್ರಮುಖ ಕಾರಣ- ಅಶೋಕ ದಳವಾಯಿ

ವಿಜಯಪುರ: ದೇಶದಲ್ಲಿ ನಡೆದ 1942ರ ಕ್ವಿಟ್ ಇಂಡಿಯಾ ಚಳವಳಿಯು ಸ್ವಾತಂತ್ರ್ಯ ಹೋರಾಟದ ಅಂತಿಮ ಘಟ್ಟವಾಗಿತ್ತು.  ಬ್ರಿಟಿಷರಿಗೆ ಅಂತಿಮ ಎಚ್ಚರಿಕೆ ಆಗಿತ್ತು. ಅದುವೇ ದೇಶಕ್ಕೆ ಸ್ವಾತಂತ್ರ್ಯ ದೊರೆಯಲು ಕಾರಣವಾಯಿತು ಎಂದು ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಹೇಳಿದರು. ತಿಕೋಟಾ ತಾಲೂಕಿನ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಮತ್ತು ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ ಸಹಯೋಗದಲ್ಲಿ ಬುಧವಾರ ಆಯೋಜಿಸಿಡಿದ್ದ ಆಗಸ್ಟ್ ಕಾಂತ್ರಿ ನೆನಪು ಮತ್ತು ಶಾಂತವೇರಿ ಗೋಪಾಲಗೌಡ ಅವರ ಜೀವನ ಮತ್ತು ಸಮಕಾಲೀನತೆಯ […]