ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಬೇಕು- ಡಾ. ಆರ್. ಎಸ್. ಮುಧೋಳ

ವಿಜಯಪುರ, ಆ. 12: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಗತ್ಯಕ್ಕೆ ತಕ್ಕಂತೆ ಕೌಶಲ್ಯಾಭಿವೃದ್ಧಿ ಮಾಡಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದ್ದಾರೆ.

ವಿವಿಯಲ್ಲಿ ಚಿಕ್ಕಮಕ್ಕಳ ವಿಭಾಗದ ಆಶ್ರಯದಲ್ಲಿ ನಡೆದ ಮಕ್ಕಳಲ್ಲಿ ಕಂಡು ಬರುವ ಗಂಭೀರ ಕಾಯಿಲೆಗಳ ನಿರ್ವಹಣೆ ವಿಧಾನದ ಬಗ್ಗೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಎರಡು ದಿನಗಳ ವಿಶೇಷ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಲಿಕಾ ಕೌಶಲ್ಯ ತರಬೇತಿ ಕಾರ್ಯಕ್ರಮ ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಪ್ರಮುಖ ಪಾತ್ರ ವಹಿಸುತ್ತವೆ.  ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಇಂಥ ಕೌಶಲ್ಯ ತರಬೇತಿ ಕಾರ್ಯಕ್ರಮಗಳಿಗೆ ಬೇಕಾಗುವ ಎಲ್ಲಾ ಬಗೆಯ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಚಿಕ್ಕ ಮಕ್ಕಳ ತಜ್ಞ ಡಾ. ಎಸ್. ವಿ. ಪಾಟೀಲ ಚಿಕ್ಕ ಮಕ್ಕಳ ವಿಭಾಗದ ಪ್ರಗತಿ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಡಾ. ರಾಘವೇಂದ್ರ ವನಕಿ, ಡಾ. ರಮೇಶ ಪೊಳ, ಡಾ. ರಮೇಶ ನೀಲನ್ನವರ, ಡಾ. ರಮೇಶ ಪತ್ತಾರ, ಡಾ. ಕಮಲ ಕಿರಣ ಹಾಗೂ ಡಾ. ಪ್ರಣಮ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ವಿಭಾಗದ ಮುಖ್ಯಸ್ಥ ಡಾ. ಎಸ್. ಎಸ್. ಕಲ್ಯಾಣಶೆಟ್ಟರ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಡಾ. ಸಿದ್ದು ಚರ್ಕಿ ಮತ್ತು ಡಾ. ವಿಜಯಲಕ್ಷ್ಮಿ ನಿರೂಪಿಸಿದರು.  ಡಾ. ಜೆ. ಪ್ರಕಾಶ ವಂದಿಸಿದರು.

ಈ ಶಿಬಿರದಲ್ಲಿ ವಿಜಯಪುರ, ಬಾಗಲಕೋಟ, ಕಲಬುರಗಿ, ಮಹಾರಾಷ್ಟ್ರದ ಸೋಲಾಪುರ ಸೇರಿದಂತೆ ನಾನಾ ಭಾಗಗಳಿಂದ 30 ಜನ ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೋಂಡಿದ್ದರು.

Leave a Reply

ಹೊಸ ಪೋಸ್ಟ್‌