ದಿ. ಡಿ.ದೇವರಾಜ್ ಅರಸು ಅವರ 108ನೇ ಜನ್ಮ ದಿನಾಚರಣೆ ಸಾಮಾಜಿಕ ಪರಿವರ್ತನೆಯಲ್ಲಿ ಡಿ.ದೇವರಾಜ್ ಅರಸು ಅವರ ಕೊಡುಗೆ ಅಪಾರ- ಟಿ. ಭೂಬಾಲನ್

ವಿಜಯಪುರ: ಹಿಂದುಳಿದ ವರ್ಗಗಳ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಡಿ. ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿ ಟಿ. ಭೂಬಾಲನ್ ಮಾತನಾಡಿದರು

ಡಿ. ದೇವರಾಜ್ ಅರಸು ಅವರು ಅನೇಕ ಜನಪರವಾದ ಯೋಜನೆ ರೂಪಿಸಿ, ಜಾರಿಗೆ ತಂದು, ನಾಡು ನುಡಿಗಾಗಿ ಶ್ರಮಿಸಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ. ದುರ್ಬಲರ ಏಳಿಗೆಗಾಗಿ ನೂರಾರು ಸಾಮಾಜಿಕ ಸುಧಾರಣಾ ಕಾಂiÀರ್iಗಳನ್ನು ಜಾರಿಗೆ ತಂದರು. ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ತೊಡೆದು ಹಾಕುವಲ್ಲಿ ಶ್ರಮಿಸಿದ್ದಾರೆ. ಈ ದೇಶ ಮಹಾನ್ ವ್ಯಕ್ತಿಗಳಿಗೆ ಜನ್ಮ ನೀಡಿದೆ. ಡಿ. ದೇವರಾಜ ಅರಸು ಅವರ ಜನಪರ ಕಾಳಜಿಯ ಸಿದ್ಧಾಂತ ಬಹಳಷ್ಟು ಜನರ ಪಾಲಿಗೆ ಬೆಳಕಾಗಿದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ವಿದ್ಯಾವಂತ ನಿರುದ್ಯೋಗಿಗಳಿಗೆ ಭತ್ಯೆ ಸ್ಟೈಫಂಡರಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ಪರಿವರ್ತನೆಯ ಹರಿಕಾರರಾದರು. ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಡಿ.ದೇವರಾಜ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ, ಕನ್ನಡ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಅಂಗೀಕರಿಸಿದ್ದು, ಸಾಂಸ್ಕøತಿಕವಾಗಿ ಅವರ ಕ್ರಮಗಳು ವಿನೂತನ ಎನಿಸಿವೆ. ಅಪೂರ್ವ ಚಿಂತನಾಶೀಲದ ಅವರ ಆದರ್ಶ ವಿಚಾರಗಳು ಅವರ ತತ್ವ ಸಿದ್ಧಾಂತ ಪಾಲಿಸೋಣ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಮಾತನಾಡಿ, ಡಿ.ದೇವರಾಜ ಅರಸು ಅವರು ಕರ್ನಾಟಕ ಕಂಡ ಓರ್ವ ಧೀಮಂತ ನಾಯಕ,ಅವರು ಅನೇಕ ಸುಧಾರಣೆಗಳನ್ನು ತಂದಿದ್ದಾರೆ.ಭೂ ಸುಧಾರಣಾ ಕಾಯ್ದೆ ರಾಜ್ಯದಲ್ಲಿ ಪರಿಣಾಮಕಾರಿ ಅನುಷ್ಠಾನಗೊಂಡಿದೆ. ಅವರ ಆದರ್ಶ ವಿಚಾರಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಸಮಾರಂಭದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಮಹೇಶ ಅಂಜುಟಗಿ ಅವರು ಮಾತನಾಡಿ, ಅರಸು ಅವರು ಕೃಷಿ ಕಾಯಕದ ಪ್ರಾವೀಣ್ಯತೆ ಹೊಂದಿದ್ದರು.ಎಲ್ಲ ಕೆಲಸ ಕಾರ್ಯಗಳನ್ನು ಅತಿ ಶ್ರದ್ಧೆಯಿಂದ ನಿರ್ವಹಿಸಬೇಕು ಎಂಬ ಆಶಯ ಹೊಂದಿದವರಾಗಿದ್ದರು. ಅವರೊಬ್ಬ ಸ್ವಾಭಿಮಾನಿ, ಅಗಾಧ ಜ್ಞಾನ ಹೊಂದಿದ್ದರು. ಹಿಂದುಳಿದ ವರ್ಗಗಳ ಆಶಾದೀಪ, ಆರ್ಥಿಕ ಶೈಕ್ಷಣಿಕ ಸಮಗ್ರ ಚಿಂತನೆಗಳ ಕಾರ್ಯಕ್ರಮ ರೂಪಿಸಿ ಅನುಷ್ಠಾನಕ್ಕೆ ತಂದರು ಎಂದು ಹೇಳಿದರು.

ಸಮಾರಂಭದಲ್ಲಿ ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಮೆರವಣಿಗೆಗೆ ಚಾಲನೆ: ಡಿ.ದೇವಾರಾಜ ಅರಸು ಅವರ ಜಯಂತಿ ಅಂಗವಾಗಿ ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಡಿ. ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಚಾಲನೆ ನೀಡಿದರು. ಕಲಾಮೇಳ ಹಾಗೂ ಕಲಾ ತಂಡಗಳೊಂದಿಗೆ ಮೆರವಣಿಗೆ ಗಾಂಧಿ ಚೌಕ್, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ ಹಾಗೂ ಕನಕದಾಸ ವೃತ್ತದ ಮಾರ್ಗವಾಗಿ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಜರುಗಿತು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪೂರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಜಿಲ್ಲಾ ಪಂಚಾಯತಿಯ ಯೋಜನಾ ವಿಭಾಗದ ಉಪ ನಿರ್ದೇಶಕ ಎ.ಬಿ.ಅಲ್ಲಾಪೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಸತಿ ನಿಲಯದ ಹಿರಿಯ ನಿಲಯ ಪಾಲಕರಾದ ಪ್ರಕಾಶ ರಾಠೋಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌