ಚಂದ್ರನ ತಲುಪಿದ ಭಾರತ- ಸಚಿವ ಎಂ. ಬಿ. ಪಾಟೀಲ ಅಭಿನಂದನೆ

ವಿಜಯಪುರ: ಭಾರತದ ಬಹುನಿರೀಕ್ಷಿತ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಕಳುಹಿಸಿದ್ದ ವಿಕ್ರಮ್ ಚಂದ್ರನ ಮೇಲೆ ಸುರಕ್ಷಿತವಾಗಿ ತಲುಪಿದೆ.  ಚಂದ್ರನನ್ನು ತಲುಪಿದ ವಿಶ್ವದ ನಾಲ್ಕನೇ ರಾಷ್ಟ್ವವಾಗಿ ಭಾರತ ಹೊರ ಹೊಮ್ಮಿದ್ದು, ಚಂದ್ರನ ದಕ್ಷಿಣ ದ್ರುವ ತಲುಪಿದ ಮೊದಲ ದೇಶ ಎಂಬ ಕೀರ್ತಿಗೆ ಭಾರತ ಪಾತ್ರವಾಗಿದೆ.

ಭಾರತದ ಚಂದ್ರಯಾನ 3 ಯಶಸ್ವಿಯಾಗಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೌಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಅವರು, ಚಂದ್ರಯಾನ 3 ಯಶಸ್ವಿಯಾಗಿದೆ.  ಕೋಟ್ಯಂತರ ಭಾರತೀಯರು ಸಂತಸ, ಹೆಮ್ಮೆ ಪಡುಂತಾಗಿದೆ.  ಐತಿಹಾಸಿಕ ಸಾಧನೆ ಮೆರೆದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ವಿಜ್ಞಾನಿಗಳು, ತಂತ್ರಜ್ಞರ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು.

 

ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆಗಿರುವ ವಿಕ್ರಮ್

ಅವರ ಸಾಧನೆ ನಮ್ಮೆಲ್ಲ ಯುವ ವಿಜ್ಞಾನಿಗಳಿಗೆ ಸ್ಪೂರ್ತಿಯಾಗಿದೆ ಎಂದು ಸಚಿವ ಎಂ. ಬಿ. ಪಾಟೀಲ ಟ್ವೀಟ್ ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಚಿವ ಎಂ. ಬಿ. ಪಾಟೀಲ ಮಾಡಿರುವ ಟ್ವೀಟ್:

https://twitter.com/MBPatil/status/1694337748176347582

ಚಂದ್ರಯಾನ 3 ಯಶಸ್ವಿಯಾಗಿರುವುದಕ್ಕೆ ಬಸವನಾಡು ವಿಜಯಪುರ ಜಿಲ್ಲಾದ್ಯಂತ ಜನತೆ ಸಂತಸ ವ್ಯಕ್ತಪಡಿಸಿದ್ದು, ಹಲವಾರು ಕಡೆಗಳಲ್ಲಿ ಸಾರ್ವಜನಿಕರು ಸಂಭ್ರಮಾಚರಣೆ ನಡೆಸಿದ್ದಾರೆ.

Leave a Reply

ಹೊಸ ಪೋಸ್ಟ್‌