ತುಬಚಿ- ಬಬಲೇಶ್ವರ ಏತನೀರಾವರಿ ಹೊಲಗಾಲುವೆ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ- ಸಚಿವ ಎಂ. ಬಿ. ಪಾಟೀಲ ಭರವಸೆ
ವಿಜಯಪುರ: ತುಬಚಿ- ಬಬಲೇಶ್ವರ ಏತನೀರಾವರಿ ಹೊಲಗಾಲುವೆಗಳ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ರೂ. 1.25 ಕೋಟಿ ವೆಚ್ಚದ ಅಲ್ಲಿಸಾಬ ವಸ್ತಿಯಿಂದ ಗುಂಡು ಸತ್ಯಪ್ಪ ಮಾಳಿ ವಸ್ತಿ(ಕರೆಮ್ಮ ದೇವಸ್ಥಾನದ ಹತ್ತಿರ) ವರೆಗೆ 3 ಕಿ. ಮೀ. ರಸ್ತೆ ಸುಧಾರಣೆ ಕಾಮಗಾರಿ ಮತ್ತು ರೂ. […]
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ
ವಿಜಯಪುರ: ಕುಡಿಯುವ ನೀರು ಪೂರೈಕೆ ಕಾರ್ಯದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರಿಕೆ ವಹಿಸಿ, ಶುದ್ಧ ಕುಡಿಯುವ ನೀರು ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತಿಯಲ್ಲಿ ಕುಡಿಯುವ ನೀರು ಮತ್ತು ಗೃಹಲಕ್ಷ್ಮೀ ಯೋಜನೆ ಪೂರ್ವಸಿದ್ಧತಾ ಕುರಿತು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಲಭ್ಯವಿರುವ ಎಲ್ಲ ಜಲಮೂಲಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು. ಜಲ ಮೂಲಗಳನ್ನು ಪ್ರತಿ ತಿಂಗಳು ಸ್ವಚ್ಛಗೊಳಿಸಬೇಕು.ಕುಡಿಯುವ ನೀರಿನ ಪರೀಕ್ಷೆ […]
5 ವರ್ಷ ಸಮಸ್ಯೆಯನ್ನು 20 ದಿನಗಳಲ್ಲಿ ಬಗೆಹರಿಸಿ ವಿತರಣೆ ಕಾಲುವೆಗೆ ನೀರು ಹರಿಸಿದ ಎಂ. ಬಿ. ಪಾಟೀಲ
ವಿಜಯಪುರ: ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಪಶ್ಚಿಮ ಕಾಲುವೆಯಲ್ಲಿ ಬರುವ ವಿತರಣೆ ಕಾಲುವೆ- 4ಕ್ಕೆ ನೀರು ಹರಿಸುವ ಸಮಸ್ಯೆಯನ್ನು ಕೇವಲ 20 ದಿನಗಳಲ್ಲಿ ಬಗೆಹರಿಸಿ ನೀರು ಬಿಡುಗಡೆ ಮಾಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಗಮನ ಸೆಳೆದಿದ್ದಾರೆ. ತಿಕೋಟಾ ತಾಲೂಕಿನ ಬಿಜ್ಜರಗಿ ಬಳಿ ಬರುವ ವಿತರಣೆ ಕಾಲುವೆ-4ರ ಸಮಸ್ಯೆ ಬಗೆಹರಿಸಿ ನೀರು ಹರಿಸಿ ಸ್ಪಂದಿಸುವಂತೆ ಕಳ್ಳಕವಟಗಿ, […]
ಭೂತನಾಳ ಕೆರೆಯ ಬಳಿ ನಿರ್ಮಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಪರಿಶೀಲನೆ ನಡೆಸಿದ ಡಿಸಿ ಟಿ. ಭೂಬಾಲನ್
ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ ನಗರದ ಭೂತನಾಳ ಕೆರೆ ಹತ್ತಿರ ಅಭಿವೃದ್ದಿ ಪಡಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೂತನಾಳ ಕೆರೆ ಪ್ರದೇಶದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಅತ್ಯಂತ ಗುಣಮಟ್ಟದ ಕಾಮಗಾರಿ ಕೈಗೊಂಡು, ಅತ್ಯಾಕರ್ಷಕವಾದ ಗಾರ್ಡನ್ ನಿರ್ಮಾಣ ಕಾಮಗಾರಿಯನ್ನು ತೀವ್ರವಾಗಿ ಕೈಗೊಂಡು ಪೂರ್ಣಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು. ಭೂತನಾಳ ಕೆರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ […]