ಬಾಲ್ಯವಿವಾಹ ತಡೆಗಟ್ಟುವಲ್ಲಿ ತಂಡವಾಗಿ ಕಾರ್ಯ ನಿರ್ವಹಿಸಿ- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ

ವಿಜಯಪುರ: ಸಾಮಾಜಿಕ ಪಿಡುಗಾದ ಬಾಲ್ಯವಿವಾಹ ತಡೆಗಟ್ಟುವಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು  ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಹಾಗೂ ತಾಲೂಕಾ ಮಟ್ಟದಲ್ಲಿ ಅರಿವು ಹಾಗೂ ಅಭಿಯಾನ ಕಾರ್ಯಕ್ರಮ ವ್ಯವಸ್ಥಿತವಾಗಿ ಆಯೋಜಿಸಬೇಕು.  ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣರಲ್ಲಿ ಅರಿವು ಮೂಡಿಸಬೇಕು. ಎಲ್ಲ ಇಲಾಖೆಯನ್ನೊಳಗೊಂಡು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು.   ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಕಾರ್ಯ ಯೋಜನೆ ಹಾಕಿಕೊಂಡು ತಡಗಟ್ಟಲು ಶ್ರಮಿಸಿಬೇಕು ಬಾಲ್ಯ ವಿವಾಹ ತಡೆಗಟ್ಟಲು ಕ್ರೀಯಾಯೋಜನೆ ರೂಪಿಸಬೇಕು. ಪ್ರತಿಯೊಬ್ಬ ಅಧಿಕಾರಿಯು ಈ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು. ಇದೊಂದು ಬಹುದೊಡ್ಡ ಸಮಸ್ಯೆಯಾಗಿದ್ದು, ತೊಡೆÀದು ಹಾಕಲು ಅವಶ್ಯವಿದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು.

ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶಿಲನಾ ಸಭೆ ನಡೆಸಿದರು

ಜಿಲ್ಲೆಯಲ್ಲಿರುವ ಕೆರೆಗಳ ಸರ್ವೇ ಕಾರ್ಯ 3 ತಿಂಗಳೊಳಗೆ ಪೂರ್ಣಗೊಳಿಸಬೇಕು. ಪಂಚಾಯತ್ ರಾಜ್ ಇಂಜಿನೀಯರಿAಗ್ ವಿಭಾಗ, ಸಣ್ಣ ನೀರಾವರಿ ಹಾಗೂ ಕಂದಾಯ ಇಲಾಖೆ ಈ ಸರ್ವೆ ಕಾರ್ಯದಲ್ಲಿ ಜಂಟಿಯಾಗಿ ನಿರ್ವಹಿಸಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು. ಗ್ರಾಮ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ ಬಹುದೊಡ್ಡದಾಗಿದ್ದು, ಈ ಬಗ್ಗೆ ನೀರು ಸಂಗ್ರಹ ಘಟಕಗಳನ್ನು ಕಾಲಕಾಲಕ್ಕೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಈ ಕಾರ್ಯವನ್ನು ನಿರಂತರವಾಗಿ ನಿರ್ವಹಿಸಬೇಕು. ಕಲುಷಿತ ನೀರು ಸೇವನೆಯಿಂದ ಅವಘಡಗಳು ಸಂಭವಿಸದAತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು. ನೀರು ಪೂರೈಸುವ ಮೊದಲು ಪರೀಕ್ಷೆ ಮಾಡಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೊಂಡು ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ತಾಲೂಕಾ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸೂಕ್ತ ಜಾಗ ಗುರುತಿಸಬೇಕು. ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ  ಈ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಂಡು ಜಾಗ ಗುರುತಿಸಿ ವರದಿ ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಅಂಗನವಾಡಿ ಕೇಂದ್ರಗಳನ್ನು ಹೊಂದಲು ಅಂಗನವಾಡಿ ಕೇಂದ್ರ  ಕಟ್ಟಡ ನಿರ್ಮಾಣಕ್ಕಾಗಿ ಸೂಕ್ತ ಜಾಗ ಗುರುತಿಸಬೇಕು. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದಕೊಂಡ ಅವರು, ಕಾಲಮಿತಿಯಲ್ಲಿ  ನಿರ್ವಹಿಸಬೇಕು ಎಂದು ಸೂಚಿಸಿದರು.

ಸರ್ಕಾರದ ಮಹತ್ವದ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸಲು ಕಾರ್ಯನಿರ್ವಹಿಸಬೇಕು. ಯಾವುದೇ ಅರ್ಹ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಬರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಸತಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರು, ಶುಚಿ ಆಹಾರ ಪೂರೈಸಬೇಕು. ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಡುವ ಮೂಲಕ ವಸತಿ ನಿಲಯದ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಬೇಕು. ಶೌಚಾಲಯ ಮತ್ತು ಸ್ನಾನಗೃಹಗಳ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ಕುಂದು-ಕೊರತೆಯಾಗದAತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ವಸತಿ ನಿಲಯಗಳಿಗೆ ಸಂಬAಧಿಸಿದ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ಸಮಸ್ಯೆ ಅರಿತು ಪರಿಹರಿಸಬೇಕು ಎಂದು ಸೂಚಿಸಿದರು.

ನಿಡಗುಂದಿ ವಸತಿ ನಿಲಯಕ್ಕೆ ಭೇಟಿ ನೀಡಿದಾಗ, ವಸತಿ ನಿಲಯಗಳಲ್ಲಿ ಕಲ್ಪಿಸಲಾಗಿರುವ ಎಲ್ಲ ಮೂಲಭೂತ ಸೌಕರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ವಸತಿ ನಿಲಯಗಳಲ್ಲಿ ಅಳವಡಿಸಿರುವ ಕಂಪ್ಯೂಟರ್‌ಗಳನ್ನು ಮಕ್ಕಳ ಬಳಕೆಗೆ ಒದಗಿಸಬೇಕು. ನಿಲಯ ಮೇಲ್ವಿಚಾರಕರು ಪ್ರತಿ ವಾರಕ್ಕೆ ಎರಡು ದಿನ ಕಂಪ್ಯೂಟರ್ ತರಬೇತಿ ನೀಡುವಂತೆ ಸೂಚಿಸಬೇಕು. ನಿಲಯದ ವಿದ್ಯಾರ್ಥಿಗಳು ಗ್ರಂಥಾಲಯದ ಉಪಯೋಗ ಪಡೆದುಕೊಳ್ಳಲು ತಿಳಿಸಬೇಕು. ವಸತಿ ನಿಲಯಕ್ಕೆ ಸಂಬAಧಿಸಿದ ಅಪೂರ್ಣ ಕಾಮಗಾರಿಗಳನ್ನು ಕಾಲ ಮಿತಿ ಹಾಕಿಕೊಂಡು ಪೂರ್ಣಗೊಳಿಸಬೇಕು. ವಸತಿ ನಿಲಯಗಳ ದುರಸ್ತಿ ಕಾಮಗಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಶೌಚಾಲಯ ಇರುವಂತೆ ನೋಡಿಕೊಳ್ಳಬೇಕು. ಅಭಿಯಾನ ಕೈಗೊಳ್ಳಬೇಕು. ಹಂತ-ಹAತವಾಗಿ ಸ್ಮಾರ್ಟ್ ಕ್ಲಾಸ್ ಹೊಂದುವ ನಿಟ್ಟಿನಲ್ಲಿ ಕ್ರೀಯಾಯೋಜನೆ ತಯಾರಿಸಿ ಸಲ್ಲಿಸಬೇಕು. ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಅವರು ಮಾಹಿತಿ ನೀಡಿ, ಈಗಾಗಲೇ 264 ಶೌಚಾಲಯ ನಿರ್ಮಾಣಕ್ಕೆ ನರೇಗಾ ಯೋಜನೆ ಕಾಮಗಾರಿ ಆರಂಭಗೊAಡಿದೆ. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿಯ ಸಿಇಒ ಅವರ ನೇತೃತ್ವದಲ್ಲಿ ಪರಿಣಾಮಕಾರಿ ಶಿಕ್ಷಣ ದೊರೆಯಬೇಕೆಂಬ ಆಶಯ ಹೊಂದಿ, ಬೆಂಚ್, ಶೂ ಅಭಿಯಾನ ಕೈಗೊಳ್ಳಲಾಗಿದೆ. ಪಾಲಕರ ಸಭೆ ನಡೆಸಲಾಗುತ್ತಿದೆ. ಜಿಲ್ಲೆಯ ವಿವಿಧ ಶಾಲೆಗಳಲ್ಲಿ ನಡೆದ ಸಭೆಯಲ್ಲಿ 65 ಸಾವಿರ ಪಾಲಕರು   ಭಾಗವಹಿಸಿದ್ದರು. ಶಿಕ್ಷಣ ಅಭಿವೃದ್ದಿಗೆ ಸÀಹಕಾರಕ್ಕಾಗಿ ಕೋರಲಾಯಿತು ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಕ್ಷೇತ್ರ 736794 ಹೆಕ್ಟೇರ್ ಗುರಿ ಹೊಂದಿದ್ದು, ಮುಂಗಾರು ಹಂಗಾಮಿನಲ್ಲಿ ತೊಗರಿ, ಹೆಸರು, ಉದ್ದು, ಮುಸುಕಿನ ಜೋಳ, ಸೂರ್ಯಕಾಂತಿ, ಸಜ್ಜೆ ಹಾಗೂ ಕಬ್ಬು ಮುಖ್ಯ ಬೆಳೆಗಳಾಗಿದ್ದು, ಇಲ್ಲಿಯವರೆಗೆ 593049 ಹೆಕ್ಟೇರ್‌ಗಳಲ್ಲಿ ಬಿತ್ತನೆಯಾಗಿದೆ. ಬಿತ್ತನೆ ಬೀಜ 870.59 ಕ್ವಿಂಟಲ್ ಮತ್ತು ರಸಗೊಬ್ಬರ 58894 ಮೆಟ್ರಿಕ್ ಟನ್ ದಾಸ್ತಾನು ಇದೆ. ಸಧ್ಯಕ್ಕೆ ಯಾವುದೇ ಕೊರತೆಯಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಾಲ ಕಾಲಕ್ಕೆ ಪಿಂಚಣಿ ಅದಾಲತ್ ನಡೆಸುವ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅರ್ಹರಿಗೆ ಒದಗಿಸಲಾಗುತ್ತಿದೆ. ಕುಡಿಯುವ ನೀರಿನ ಯಾವುದೇ ಸಮಸ್ಯೆ ಇರುವುದಿಲ್ಲ. ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.  ಅವರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಇಂಡಿ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ, ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಜಿಲ್ಲಾ ಶಸ್ತç ಚಿಕಿತ್ಸಕ ಎಸ್.ಎಲ್ ಲಕ್ಕಣ್ಣವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪೂರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಸೇರಿದಂತೆ ಜಿಲ್ಲಾ ಮಟ್ಟದ ನಾನಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌