ಶಿಕ್ಷಕರ ದಿನಾಚರಣೆ ಅಂಗವಾಗಿ 9 ಜನ ವೈದ್ಯ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ, 5 ಜನ ನಿವೃತ್ತ ವೈದ್ಯರಿಗೆ ಗೌರವ ಸಲ್ಲಿಕೆ

ವಿಜಯಪುರ: ವೈದ್ಯರು ವೃತ್ತಿಯ ಜೊತೆಗೆ ವೈದ್ಯಕೀಯ ಶಿಕ್ಷಕರಾಗಿಯೂ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ದಾವಣಗೆರೆಯ ಎಸ್. ಎಸ್. ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಮತ್ತು ಮುಖ್ಯಸ್ಥ ಡಾ. ಬಿ. ಎಸ್. ಪ್ರಸಾದ ಹೇಳಿದ್ದಾರೆ.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ ಶಿಕ್ಷಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯಕೀಯ ವೃತ್ತಿ ಪವಿತ್ರವಾಗಿದೆ. ಇದರ ಜೊತೆಗೆ ವೈದ್ಯರು ಮೆಡಿಕಲ್ ಕಾಲೇಜುಗಳಲ್ಲಿ ಪಾಠ ಮಾಡಲು ಹೆಚ್ಚಿನ ಅಧ್ಯಯನದ ಅಗತ್ಯ ಇರುತ್ತದೆ. ಬದಲಾಗುತ್ತಿರುವ ವಿದ್ಯಮಾನಗಳಿಗೆ ಅನುಗುಣವಾಗಿ ವೃತ್ತಿ ಮತ್ತು ಬೋಧನಾ ಕೌಶಲ್ಯವನ್ನು ಅಲವಡಿಸಿಕೊಳ್ಳಬೇಕಾಗುತ್ತದೆ. ಅಲ್ಲದೇ, ವೈದ್ಯಕೀಯ ಕ್ಷೇತ್ರದಲ್ಲಿ ಎದುರಾಗುವ ಸವಾಲಗಳನ್ನು ಮೆಟ್ಟಿ ಮುನ್ನಡೆಯಬೇಕಾಗುತ್ತದೆ ಎಂದು ಅವರು ಹೇಳಿದರು.

ವಿಜಯಪುರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಯಲ್ಲಿ ಶಿಕ್ಷಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಡಾ. ಬಿ. ಎಸ್. ಪ್ರಸಾದ ಮಾತನಾಡಿದರು

ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ 5 ಜನ ಹಿರಿಯ ವೈದ್ಯರಾದ ಡಾ. ಬಿ. ಸಿ. ಉಪ್ಪಿನ, ಡಾ. ವಿ. ಜಿ. ಕುಲಕರ್ಣಿ, ಡಾ. ಎಸ್. ಪಿ. ಗುಗ್ಗರಿಗೌಡರ, ಡಾ. ಎನ್. ಎಚ್. ಕುಲಕರ್ಣಿ ಮತ್ತು ಡಾ. ಸತೀಶ ಜಿಗಜಿನ್ನಿ ಅವರನ್ನು ಸನ್ಮಾನಿಸಲಾಯಿತು. ಅಲ್ಲದೇ, ವೈದ್ಯಕೀಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಒಟ್ಟು 9 ಜನ ವೈದ್ಯರಾದ ಡಾ. ಮಲ್ಲನಗೌಡ ಪಾಟೀಲ, ಡಾ. ವಿಜಯಕುಮಾರ ವಾರದ, ಡಾ. ರೇಖಾ ಬಿರಾದಾರ, ಡಾ. ಅನ್ನಪೂರ್ಣ ಸಜ್ಜನ, ಡಾ. ಸುರೇಖಾ ಅರಕೇರಿ, ಡಾ. ಲತಾ ಮಲ್ಲೂರ, ಡಾ. ನೀಲಮ್ಮ ಪಾಟೀಲ, ಡಾ. ಶ್ರೀಲಕ್ಷ್ಮಿ ಬಗಲಿ, ಡಾ. ಈಶ್ವರ ಬಾಗೋಜಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿವಿಯ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಮತ್ತು ಪ್ರಾಚಾರ್ಯ ಡಾ. ಅರವಿಂದ ಪಾಟೀಲ ಮಾತನಾಡಿದರು. ಉಪಪ್ರಾಚಾರ್ಯೆ ಡಾ. ಸುಮಂಗಲಾ ಪಾಟೀಲ ಉಪಸ್ಥಿತರಿದ್ದರು.

ವೈದ್ಯಕೀಯ ಮಹಾವಿದ್ಯಾಲಯ ಉಪ ಪ್ರಾಂಶುಪಾಲ ಡಾ. ಮಲ್ಲನಗೌಡ ಪಾಟೀಲ ಸ್ವಾಗತಿಸಿದರು. ಡಾ. ಅಶ್ವಿನಿ ನುಚ್ಚಿ ವಂದಿಸಿದರು.
ಈ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಆಮಂತ್ರಿತರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌