ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲಿಯೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸಿದ್ಧರಾಮಯ್ಯ ಸೂಚನೆ
ಬೆಂಗಳೂರು : ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ ಲೆಕ್ಕಿಗರು ಗ್ರಾಮ ಪಂಚಾಯಿತಿಗಳಲ್ಲಿಯೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು. ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯಿತಿಗಳಲ್ಲಿಯೇ […]
ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ
ವಿಜಯಪುರ: ವಿಜಯಪುರದ ಲೀಡ್ ಎನ್ ಜಿ ಓ ಗ್ರಾಮೀಣಾಭಿವೃದ್ಧಿ ಸಂಸ್ಥೆ(ಐ.ಆರ್.ಡಿ), ಮುತ್ತೂಟ್ ಫೈನಾನ್ಸ್ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಜಲನಗರದ ಮುಖ್ಯ ರಸ್ತೆಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ಧಿನ್ ಸೌದಾಗರ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐ ಆರ್ ಡಿ ಸಂಸ್ಥೆಯು ಮಹಾನಗರ ಪಾಲಿಕೆ ಸಹಕಾರದೊಂದಿಗೆ ನಗರದ ಜಲನಗರ ಮುಖ್ಯರಸ್ತೆಯ ಎರಡೂ ಬದಿಗಳಲ್ಲಿ ಸುಮಾರು 500 ಕ್ಕೂ ಹೆಚ್ಚು ಗಿಡಗಳನ್ನು ನೆಡುತ್ತಿದ್ದು ಈ ಕಾರ್ಯಕ್ಕೆ ಮುತ್ತೂಟ್ ಫೈನಾನ್ಸ್ ಸಂಸ್ಥೆ […]
ದೀಪಾ ತಟ್ಟಿಮನಿ ಅವರಿಗೆ ರಾಷ್ಟ್ರೀಯ ವುಮೆನ್ ಎಕ್ಸಲೆನ್ಸ್- 2023 ಪ್ರಶಸ್ತಿ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ದೀಪಾ ತಟ್ಟಿಮನಿ ಅವರಿಗೆ ನವದೆಹಲಿಯ ಇಂಡಿಯನ್ ಗ್ಯಾಲಕ್ಸಿ ಫೌಂಡೇಶನ್ 2023ನೇ ವರ್ಷದ ನ್ಯಾಷನಲ್ ವುಮೆನ್ ಎಕ್ಸಲೆನ್ಸ್ ಪ್ರಶಸ್ತಿ ನೀಡಿದೆ. ಡಾ. ದೀಪಾ ತಟ್ಟಿಮನಿ ಅವರು ಮಹಿಳಾ ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಅಧ್ಯಯನ ಮಾಡುತ್ತಿದ್ದಾರೆ. ಜ್ಞಾನದೀಪ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆಯಾಗಿ ಸುಮಾರು ಐದು ವರ್ಷಗಳಿಂದ ಇವರು […]
ವಿಜಯಪುರ ಜಿಲ್ಲಾಡಳಿತದ ವತಿಯಿಂದ ಸೆ. 15ರಂದು ಸಂವಿಧಾನ ದಿನ ಆಚರಣೆಗೆ ನಿರ್ಧಾರ
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಸೆ. 15ರಂದು ರಾಜ್ಯಾದ್ಯಂತ ಏಕ ಕಾಲದಲ್ಲಿ ಸಂವಿಧಾನ ಪೀಠಿಕೆ ಬೋಧಿಸುವುದರ ಮೂಲಕ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಅಂದು ಅರ್ಥಪೂರ್ಣವಾಗಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು. ಸೆ. 15 ರಂದು ಅಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ […]
ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ನೂತನ ಅಧ್ಯಕ್ಷರಾಗಿ ಕುಮಾರ ಚಂದ್ರಕಾಂತ ದೇಸಾಯಿ, ಉಪಾಧ್ಯಕ್ಷರಾಗಿ ಅಶೋಕ ಪಾಂಡಪ್ಪ ಲೆಂಕೆಣ್ಣವರ ಆಯ್ಕೆ
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ಪ್ರತಿಷ್ಠಿತ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಕುಮಾರ ಚಂದ್ರಕಾಂತ ದೇಸಾಯಿ ಮತ್ತು ಉಪಾಧ್ಯಕ್ಷರಾಗಿ ಅಶೋಕ ಪಾಂಡಪ್ಪ ಲೆಂಕೆಣ್ಣವರ ಆಯ್ಕಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕುಮಾರ ಚಂದ್ರಕಾಂತ ದೇಸಾಯಿ(ಜೈನಾಪೂರ) ಪರ 11 ಮತಗಳು ಬಂದರೆ ಅವರ ಪ್ರತಿಸ್ಪರ್ಧಿ ಎಚ್. ಎಸ್. ಕೋರಡ್ಡಿ ಪರ 8 ಮತಗಳು ಬಂದವು. ಹೀಗಾಗಿ ಕುಮಾರ ಚಂದ್ರಾಕಾಂತ ದೇಸಾಯಿ ಮೂರು ಮತಗಳ ಅಂತರದಿಂದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಪಾಂಡಪ್ಪ […]