ವಿಜಯಪುರ ಜಿಲ್ಲಾಡಳಿತದ ವತಿಯಿಂದ ಸೆ. 15ರಂದು ಸಂವಿಧಾನ ದಿನ ಆಚರಣೆಗೆ ನಿರ್ಧಾರ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಸೆ. 15ರಂದು ರಾಜ್ಯಾದ್ಯಂತ ಏಕ ಕಾಲದಲ್ಲಿ ಸಂವಿಧಾನ ಪೀಠಿಕೆ ಬೋಧಿಸುವುದರ ಮೂಲಕ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಅಂದು ಅರ್ಥಪೂರ್ಣವಾಗಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. 

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು.  ಸೆ. 15 ರಂದು ಅಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಡಾ. ಅಂಬೇಡ್ಕರ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡು ಸಂವಿಧಾನ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ನಾನಾ ಸಂಘ-ಸAಸ್ಥೆಗಳು, ವ್ಯಾಪಾರಸ್ಥರು, ಗಣ್ಯರು, ಸೇರಿದಂತೆ ಸಾರ್ವಜನಿಕರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.    .

ಅದರಂತೆ ಎಲ್ಲ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ವಿವಿಧ ಶಾಲಾ ಕಾಲೇಜ್ ವಿದ್ಯಾರ್ಥಿಗಳು ಕಾಯಕ್ರಮದಲ್ಲಿ ಭಾಗವಹಿಸುವಂತೆ ಕ್ರಮ ವಹಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ  ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಆಜೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ಹಿಂದುಳಿದ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪೂರ, ನಗರಾಭಿವೃದ್ಧಿ ಕೋಶದ  ವಿಜಯಕುಮಾರ ಮೆಕ್ಕಳಕಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ  ಬಿ.ನಾಗರಾಜ್, ಹಿರಿಯ ನಾಗರೀಕ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಅಡಿವೆಪ್ಪ ಸಾಲಗಲ್ಲ, ಅಭಿಷೇಕ ಚರ್ಕವರ್ತಿ, ಎಮ್.ವಾಯ್. ಮಯೂರ, ಪರಶುರಾಮ ಜಿಗಜಿಣಗಿ, ಮಹಾಂತೇಶ ಸಾಸಬಾಳ, ಸಿದ್ದು ರಾಯಣ್ಣವರ, ಅರವಿಂದ ಸಾಲವಾಡಗಿ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ಗಿರೀಶ ಕುಲಕರ್ಣಿ, ದೆವೇಂದ್ರ ಮೀರೇಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌